ಇದೇ ವೇಳೆ, ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನಹರಣ ಕಾರ್ಯದಲ್ಲಿ ಅಕ್ರಮ ನಡೆದಿದೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ನಾಯಿಗಳ ಸಂತಾನಹರಣಕ್ಕಾಗಿ ಸುಮಾರು 40 ಲಕ್ಷ ರೂಪಾಯಿ ಹಣ ಖರ್ಚು ಮಾಡಲಾಗಿದೆ. ಆದರೆ ಇದೇ ಅವಧಿಯಲ್ಲಿ ನಗರದಲ್ಲಿ 13,225 ನಾಯಿ ಕಡಿತ ಕೇಸ್ಗಳು ದಾಖಲಾಗಿವೆ ಎಂದು ಅವರು ಅಂಕಿ-ಅಂಶಗಳನ್ನು ಉಲ್ಲೇಖಿಸಿದ್ದಾರೆ.