ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕೇಳ್ತಿದ್ದಂತೆ ಕಿರಿಕಿರಿ!...ಮಾಧ್ಯಮ ಪ್ರತಿನಿಧಿಯನ್ನೇ ನೀವು ಬಿಜೆಪಿಯವರಾ ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ! | Rahul Gandhi

Rahul Gandhi  | ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕೇಳ್ತಿದ್ದಂತೆ ಕಿರಿಕಿರಿ!...ಮಾಧ್ಯಮ ಪ್ರತಿನಿಧಿಯನ್ನೇ ನೀವು ಬಿಜೆಪಿಯವರಾ ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ!
Rahul Gandhi | ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕೇಳ್ತಿದ್ದಂತೆ ಕಿರಿಕಿರಿ!...ಮಾಧ್ಯಮ ಪ್ರತಿನಿಧಿಯನ್ನೇ ನೀವು ಬಿಜೆಪಿಯವರಾ ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ!
Published on
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು ಮಾಡಿದ ಗಂಭೀರ ಆರೋಪಗಳ ಕುರಿತು ಸಂಸತ್ತಿನ ಹೊರಗೆ ಪ್ರಶ್ನಿಸಿದ ಮಾಧ್ಯಮ ಪ್ರತಿನಿಧಿಗೆ, ನೀವು ಬಿಜೆಪಿ ಪಕ್ಷದವರಾ? ಎಂದು ಮರುಪ್ರಶ್ನಿಸುವ ಮೂಲಕ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ನೇರ ಉತ್ತರ ನೀಡದೆ ಜಾರಿಕೊಂಡಿದ್ದಾರೆ.
ಗಾಯಗೊಂಡಿರುವ ಪೊಲೀಸರ ಪರ, ಅವರ ಕುಟುಂಬಸ್ಥರು ಹರಿಹಾಯ್ದ ಬೆನ್ನಲ್ಲೇ ಈ ಕುರಿತು ಉತ್ತರ ನೀಡಲು ನಿರಾಕರಿಸಿದ ರಾಹುಲ್ ಗಾಂಧಿ ನಡೆ, ಈಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.

ಕುಟುಂಬಸ್ಥರ ಆರೋಪವೇನು...?

ಇದಕ್ಕೂ ಮುನ್ನ ದೆಹಲಿಯಲ್ಲಿ ಸುದ್ಧಿಗೋಷ್ಠಿ ನಡೆಸಿದ್ದ ಗಾಯಾಳು ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರು, ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳು ಎದುರಿಸಿದ ಭೀಕರ ಪರಿಸ್ಥಿತಿಯನ್ನು ವಿವರಿಸಿದ್ದರು. ಕರ್ತವ್ಯ ನಿರತರಾಗಿದ್ದಾಗ ಪೊಲೀಸ್ ಅಧಿಕಾರಿಗಳ ಮೇಲೆ ಸತತ ಹಿಂಸಾತ್ಮಕ ದಾಳಿ ನಡೆದಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಆರೋಪಗಳ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ವಿಷಯಕ್ಕೆ ಉತ್ತರಿಸುವ ಬದಲು ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಯ ರಾಜಕೀಯ ಒಲವನ್ನು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗಾಯಾಳು ಸಿಬ್ಬಂದಿಯ ಸಂಬಂಧಿಕರು ಮಾತನಾಡಿ, ಜಂತರ್ ಮಂತರ್ ಪ್ರತಿಭಟನೆ ವೇಳೆ ಅನೇಕ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಗಾಯಗೊಂಡ ಸಿಬ್ಬಂದಿಯ ಕಷ್ಟ ಹಾಗೂ ತ್ಯಾಗಕ್ಕೆ ಸಾರ್ವಜನಿಕವಾಗಿ ಅರ್ಹ ಗಮನ ಸಿಕ್ಕಿಲ್ಲ ಎಂದು ದೂರಿದ್ದರು. ಗಾಯಗೊಂಡ ಅಧಿಕಾರಿಗಳಿಗೆ ಸೂಕ್ತ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದ್ದರು.
ಅಲ್ಲದೆ, ಪತ್ರಿಕಾಗೋಷ್ಠಿಯ ಸಮಯದಲ್ಲಿ ಕುಟುಂಬಸ್ಥರು ಪ್ರತಿಭಟನಾಕಾರರು ಪೊಲೀಸರ ಮೇಲೆ ದಾಳಿ ನಡೆಸುತ್ತಿರುವ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ನುಸುಳಿ ಪೊಲೀಸ್ ಪಡೆಯ ಮೇಲೆ ಹಿಂಸಾತ್ಮಕ ದಾಳಿ ನಡೆಸಿವೆ ಎಂದು ಆರೋಪಿಸಿದ ಅವರು, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಜುಲೈ 20 ರಂದು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ದೆಹಲಿ ಪೊಲೀಸರು ನಡೆಸಿದ್ದಾರೆನ್ನಲಾದ ಬಲಪ್ರಯೋಗದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಉನ್ನತಾಧಿಕಾರ ಸಮಿತಿಯಿಂದ ಸ್ವತಂತ್ರ ತನಿಖೆ ನಡೆಸಬೇಕೆಂದು ರಾಹುಲ್ ಗಾಂಧಿ ನಿನ್ನೆಯಷ್ಟೆ ಒತ್ತಾಯಿಸಿದ್ದರು. ಇದೇ ವೇಳೆ, ಜುಲೈ 29 ರಂದು ಲೋಕಸಭೆಯ ಕಲಾಪದಲ್ಲಿ ರಾಹುಲ್ ಗಾಂಧಿ ಮಾಡಿದ ಹೇಳಿಕೆಗಳನ್ನು ವಿರೋಧಿಸಿ ಬಿಜೆಪಿ ಸಂಸದ ಅನುರಾಗ್ ಸಿಂಗ್ ಠಾಕೂರ್ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net