ಹಗಲು ಹೊತ್ತಿನಲ್ಲೇ ನಡೆದ ಈ ಘಟನೆಯನ್ನು ಪಂಜಾಬ್ ವಿಧಾನಸಭೆಯ ವಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಜ್ವಾ ಖಂಡಿಸಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅಧಿಕಾರವಧಿಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದ ಅವರು, ಆಡಳಿತ ಪಕ್ಷದ ನಾಯಕರಿಗೆ ಸುರಕ್ಷಿತ ಇಲ್ಲದಿದ್ದಾಗ, ಸಾಮಾನ್ಯ ನಾಗರಿಕರ ಕಥೆ ಏನು ಎಂದು ಪ್ರಶ್ನಿಸಿದ್ದಾರೆ(ಏಜೆನ್ಸೀಸ್).