ಇನ್ನೂ ತಮ್ಮ ಮೇಲಿನ ಹಲ್ಲೆಯ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, ದೈಹಿಕ ದಾಳಿಗಳು ಭಯ ಮತ್ತು ಹೇಡಿತನದ ಸಂಕೇತವಾಗಿದೆ. ನಾವು ಶಾಂತಿಯುತವಾಗಿ ನಮ್ಮ ಧ್ವನಿಯನ್ನು ಎತ್ತುವುದನ್ನು ಮುಂದುವರಿಸುತ್ತೇವೆ. ನಾನು ಗಾಂಧಿ ಮತ್ತು ಅಂಬೇಡ್ಕರ್ ಅವರ ಅನುಯಾಯಿ, ಮತ್ತು ನಾನು ಈ ಯುದ್ಧವನ್ನು ಶಾಂತಿ ಮತ್ತು ಪ್ರೀತಿಯಿಂದ ಹೋರಾಡುತ್ತಲೇ ಇರುತ್ತೇನೆ ಎಂದು ಬರೆದುಕೊಂಡಿದ್ದಾರೆ.