ಚೆನ್ನೈ: ಕೆಲವೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಲ್ಲಿನ ಪಕ್ಷಗಳು ಸಿದ್ಧತೆ ನಡೆಸಿದ್ದು, ಆರೋಪ-ಪ್ರತ್ಯಾರೋಪ, ವಾಗ್ದಾಳಿಗಳಲ್ಲಿ ತೊಡಗಿವೆ. ಹಾಗೆಯೇ ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ ವಿರುದ್ಧ ವ್ಯಂಗ್ಯವಾಡಿರುವ ಡಿಎಂಕೆ ನಾಯಕ ಮತ್ತು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್(Udhayanidhi Stalin) ಈಗ ಅದು ಅಮಿತ್ ಶಾ ದ್ರಾವಿಡ ಮುನ್ನೇತ್ರ ಕಳಗಂ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.