ಎನ್‌ಡಿಟಿವಿ ಜೊತೆಗೆ ಮಾತನಾಡಿದ ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ, ಕಾಂಗ್ರೆಸ್ ಅನ್ನು ಬೆನ್ನಿಗೆ ಚೂರಿ ಹಾಕುವ ಪಕ್ಷ ಎಂದು ಕಟುವಾಗಿ ಟೀಕಿಸಿದ್ದು, ಈ ಚುನಾವಣೆಯಲ್ಲಿ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೇ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು, ಇಲ್ಲದಿದ್ದರೆ ಅವರಿಗೆ ಒಂದು ಸ್ಥಾನವೂ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. ಈ ವಿಚಾರವಾಗಿ ಪಕ್ಷದ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ನೇರ ಉತ್ತರ ನೀಡದಿದ್ದರೂ, ಮೈತ್ರಿ ಧರ್ಮವನ್ನು ಗಾಳಿಗೆ ತೂರಿದ ಕಾಂಗ್ರೆಸ್ ನಿಲುವಿನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.