ಲ್ಯಾಂಡಿಂಗ್ ವೇಳೆ ಕಳಚಿದ ನೋಸ್ ವೀಲ್: ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ! Air India Express

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Air India Express: ಹೈದರಾಬಾದ್‌ನಿಂದ ಫುಕೆಟ್‌ಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (IX 901) ವಿಮಾನವು ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನಲೆ ವಿಮಾನದ ಮುಂಭಾಗದ ಚಕ್ರಕ್ಕೆ ಹಾನಿಯಾಗಿದ್ದು, ಸುಮಾರು 6 ಗಂಟೆಗಳ ತನಕ ರನ್​ವೇಯನ್ನು ಮುಚ್ಚಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
IX938 ವಿಮಾನದಲ್ಲಿದ್ದ ಎಲ್ಲಾ 133 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದು, ಯಾವುದೇ ಗಾಯಗಳು ಕಂಡುಬಂದಿಲ್ಲ. ಆದಾಗ್ಯೂ, ಘಟನೆಯ ಬಳಿಕ ತಪಾಸಣೆ ಮತ್ತು ತೆರವುಗೊಳಿಸಲು ಅವಕಾಶ ನೀಡುವ ಸಲುವಾಗಿ ಸಂಜೆ 6 ಗಂಟೆಯವರೆಗೆ ರನ್​ವೇಯನ್ನು ಮುಚ್ಚಲಾಗಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಆರಂಭಿಕ ವರದಿಗಳ ಪ್ರಕಾರ, ಲ್ಯಾಂಡಿಂಗ್ ಸಮಯದಲ್ಲಿ ವಿಮಾನದ ನೋಸ್ ಲ್ಯಾಂಡಿಂಗ್ ಗೇರ್ ಹಾನಿಗೊಳಗಾಗಿದ್ದು, ಇದರ ಪರಿಣಾಮ ರನ್​ವೇಯಲ್ಲಿ ಕಠಿಣವಾಗಿ ಸ್ಪರ್ಶಿಸಿತು. ಆದಾಗ್ಯೂ, ತಂಡಗಳು ಪರಿಸ್ಥಿತಿಯನ್ನು ಸುಧಾರಿಸಿ ಮುಂದಿನ ವಿಮಾನಗಳಿಗೆ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳುವವರೆಗೂ ಅಧಿಕಾರಿಗಳು ತಾತ್ಕಾಲಿಕ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದರು.
ಈ ಘಟನೆಯ ಬಗ್ಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ವಿಷಾದ ವ್ಯಕ್ತಪಡಿಸಿದ್ದು, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮತ್ತು ಥೈಲ್ಯಾಂಡ್‌ನ ವಿಮಾನಯಾನ ಅಧಿಕಾರಿಗಳು ಈ ಹಾರ್ಡ್ ಲ್ಯಾಂಡಿಂಗ್‌ಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net