ಇದಿಷ್ಟೇ ಅಲ್ಲದೆ, ನಿಯಂತ್ರಕ ಸಂಸ್ಥೆಯು ವಿಮಾನದ ವಿಳಂಬ, ರದ್ದತಿ ಮತ್ತು ಬೋರ್ಡಿಂಗ್ ನಿರಾಕರಣೆಯ ಸಂದರ್ಭಗಳಲ್ಲಿ ಪ್ರಯಾಣಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದೆ. ಇದಕ್ಕಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳು ತಮ್ಮ ವೆಬ್‌ಸೈಟ್‌ಗಳು, ಮೊಬೈಲ್ ಆ್ಯಪ್‌ಗಳು, ಬುಕಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ವಿಮಾನ ನಿಲ್ದಾಣದ ಕೌಂಟರ್‌ಗಳಲ್ಲಿ ಈ ಹಕ್ಕುಗಳನ್ನು ಸ್ಪಷ್ಟವಾಗಿ ಮತ್ತು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಲಾಗಿದೆ. ಇದರಿಂದ ಪ್ರಯಾಣಿಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಂಡು ಸರಿಯಾದ ಸಹಾಯ ಪಡೆಯಬಹುದು.