1991 ರಲ್ಲಿ ಬಾರಾಮತಿಯಿಂದ ಲೋಕಸಭೆಗೆ ಆಯ್ಕೆಯಾದ ಅಜಿತ್ ಪವಾರ್, ಅಂದಿನ ಪ್ರಧಾನಿ ನರಸಿಂಹರಾವ್ ಸರ್ಕಾರದಲ್ಲಿ ರಕ್ಷಣಾ ಸಚಿವರಾದ ಅವರ ಚಿಕ್ಕಪ್ಪ ಶರದ್ ಪವಾರ್ಗೆ ಆ ಕ್ಷೇತ್ರವನ್ನು ನೀಡಿ ತಾವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತಾರೆ. ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಸತತ 8 ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾದರು. (1991 ರ ಉಪಚುನಾವಣೆ, 1995, 1999, 2004, 2009, 2014, 2019 ಮತ್ತು 2024 ರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು.