ಅಜಿತ್ ಪವಾರ್ ವಿಧಿವಶ: ಇಂದಿನಿಂದ ಮೂರು ದಿನಗಳ ಕಾಲ ಸರ್ಕಾರಿ ಶೋಕಾಚರಣೆ ರಾಜ್ಯದಲ್ಲಿ ಏನಿರುತ್ತೆ? ಏನಿರಲ್ಲ? Ajit Pawar

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Ajit Pawar: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಇಂದು (ಜ.28) ಬೆಳಿಗ್ಗೆ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಕೆಲವೇ ಗಂಟೆಗಳ ನಂತರ, ರಾಜ್ಯದ ಜನರಿಗೆ ಪವಾರ್​ ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಸಿಎಂ ದೇವೆಂದ್ರ ಫಡ್ನಾವೀಸ್​  ಮೂರು ದಿನಗಳ ಶೋಕಾಚಾರಣೆಯನ್ನು ಘೋಷಿಸಿದ್ದಾರೆ.

ಮೂರು ದಿನಗಳ ಶೋಕಾಚಾರಣೆಯಲ್ಲಿ ಏನಿರುತ್ತದೆ? ಏನಿರುವುದಿಲ್ಲ?

ಏನು ಮುಚ್ಚಲ್ಪಡುವ ಸಾಧ್ಯತೆಯಿದೆ? 

ಮಾಹಿತಿ ಪ್ರಕಾರ ಶೋಕಾಚಾರಣೆಯ ಸಮಯದಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಡುವ ಸಾಧ್ಯತೆಯಿದೆ. ಹಿರಿಯ ಅಧಿಕಾರಿಯನ್ನು ಗೌರವಿಸುವ ಸಲುವಾಗಿ ಇಂದು ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. ಈ ಸಮಯದಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ. 

ಏನು ತೆರೆಯುವ ಸಾಧ್ಯತೆಯಿದೆ? 

ಜನರ ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಗಳು, ಆಂಬ್ಯುಲೆನ್ಸ್ ಸೇವೆಗಳು, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆಗಳು, ಹಾಲು ವಿತರಣೆ, ಮಾಧ್ಯಮ ಕಚೇರಿ, ಖಾಸಗಿ ಕಂಪನಿಗಳು, ರೈಲುಗಳು, ಬಸ್ಸುಗಳು, ಅಂಗಡಿಗಳು, ಮಾರುಕಟ್ಟೆ ಮತ್ತು ಚಿಲ್ಲರೆ ಅಂಗಡಿಗಳು ಪ್ರತಿನಿತ್ಯದಂತೆಯೇ ಸೇವೆಯನ್ನು ಸಲ್ಲಿಸಲಿವೆ.
ಅಜಿತ್ ಪವಾರ್ ಅವರ ಕೊಡುಗೆಗಳನ್ನು ಸ್ಮರಿಸಿದ ಸಿಎಂ ಫಡ್ನವೀಸ್, ಅಜಿತ್​ ದಾದಾ ಅವರು  ನೆಲದ ಮಟ್ಟದಿಂದ ಜನರೊಂದಿಗೆ ಸಂಪರ್ಕ ಹೊಂದಿದ ನಾಯಕರಾಗಿದ್ದರು. ಅವರ ನಿಧನ ತೀವ್ರ ದುಃಖಕರ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ನಾನು ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಈ ದುಃಖಕರ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ನಾನು ನಿಲ್ಲುತ್ತೇನೆ ಎಂದು ತಿಳಿಸಿದ್ದಾರೆ.

ದುರಂತ ಹೇಗಾಯಿತು?

ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳು ಬಾರಾಮತಿಯಲ್ಲಿ ನಡೆಯುತ್ತಿರುವ ಹಿನ್ನಲೆ ಅಜಿತ್ ಪವಾರ್ ಬುಧವಾರ (ಜ.28) ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಈ ವೇಳೆ ವಿಮಾನವು ನಿಲ್ದಾಣದ ರನ್‌ವೇಯಲ್ಲಿ ಇಳಿಯುತ್ತಿದ್ದಾಗ, ಹಠಾತ್ ತಾಂತ್ರಿಕ ದೋಷ ಸಂಭವಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡು ಕಾರಣ ವಿಮಾನ ಅಪಘಾತಕ್ಕೀಡಾಯಿತು. 
ಪ್ರಾಥಮಿಕ ವರದಿಗಳ ಪ್ರಕಾರ, ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net