ಎನ್ಸಿಪಿ ಮುಖಂಡ ಅಜಿತ್ ಪವಾರ್, ಫೆಬ್ರವರಿ 5 ರಂದು ನಡೆಯಲಿದ್ದ ಜಿಲ್ಲಾ ಪರಿಷತ್ ಚುನಾವಣೆಗೆ ಮುನ್ನ ಪುಣೆಯ ಜಿಲ್ಲೆಯಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ಮುಂಬೈನಿಂದ ತೆರಳಿದ್ದರು. ಅಪಘಾತದಲ್ಲಿ ಅಜಿತ್ ಪವಾರ್ ಜತೆಗೆ ಕ್ಯಾಪ್ಟನ್ ಸುಮಿತ್ ಕಪೂರ್, ಸಹ-ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್, ವೈಯಕ್ತಿಕ ಭದ್ರತಾ ಅಧಿಕಾರಿ ವಿದಿಪ್ ಜಾಧವ್ ಮತ್ತು ವಿಮಾನ ಸಹಾಯಕಿ ಪಿಂಕಿ ಮಾಲಿ ಸಾವನ್ನಪ್ಪಿದರು.