ಸಂಜೆ 5 ಗಂಟೆಗೆ ಮಹಾರಾಷ್ಟ್ರದ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಈ ವೇಳೆ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ಪಕ್ಷದ ನಾಯಕರಾದ ಪ್ರಫುಲ್ ಪಟೇಲ್, ಸುನೀಲ್ ತಟ್ಕರೆ, ಛಗನ್ ಭುಜಬಲ್ ಸೇರಿ ಪಕ್ಷದ ಶಾಸಕರು, ಮುಖಂಡರು ಉಪಸ್ಥಿತರಿದ್ದರು.