ಮಮತಾ ಬ್ಯಾನರ್ಜಿಗೆ ಐತಿಹಾಸಿಕ ಗೆಲುವು!..ದೀದಿ ಪರ ಬ್ಯಾಟ್ ಬೀಸಿದ ಅಖಿಲೇಶ್ ಯಾದವ್​ | Akhilesh Yadav

Akhilesh Yadav | ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್
Akhilesh Yadav | ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್
Published on
ಲಖನೌ: ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಕೇಂದ್ರ ಪಡೆಗಳ ನೇತೃತ್ವದಲ್ಲಿ ಸಮಾನಾಂತರ ಆಡಳಿತ ರಚನೆಯನ್ನು ರೂಪಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್​​, ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬೃಹತ್​ ಅಂತರದಿಂದ ಗೆಲ್ಲಲಿದ್ದಾರೆ ಮತ್ತು ಜನರು ಅವರ ಪರವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಮಟ್ಟದಲ್ಲಿಯೂ ಹಸ್ತಕ್ಷೇಪ ನಡೆಯುತ್ತಿದ್ದು, ಡಿಜಿಪಿ ಯಾರಾಗಿರಬೇಕು ಎಂಬುದರ ಕುರಿತು ಹೆಸರುಗಳನ್ನು ಸೂಚಿಸಲಾಗುತ್ತಿದೆ ಮತ್ತು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗಿಂತ ಒಬ್ಬ ಐಪಿಎಸ್ ಅಧಿಕಾರಿಯನ್ನು ಮುಂದಿಡಲಾಗಿದೆ, ಕೆಲವು ಅಧಿಕಾರಿಗಳು ಒತ್ತಡ ಅಥವಾ ಪ್ರಚೋದನೆಯಿಂದ ವರ್ತಿಸುತ್ತಿದ್ದಾರೆ ಎಂದು ಅಖಿಲೇಶ್​ ಆರೋಪಿಸಿದ್ದಾರೆ. ನೇಮಕಗೊಂಡಿರುವ ಕೆಲವು ಅಧಿಕಾರಿಗಳಿಗೆ ಈಗಾಗಲೇ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಭವಿಷ್ಯದ ಲಾಭದ ಭರವಸೆ ನೀಡಲಾಗಿ. ತನಿಖೆಗಳ ಭೀತಿಯಿಂದ ಒತ್ತಡಕ್ಕೆ ಒಳಗಾಗಿರುವ ಕೆಲವರನ್ನು ಇಂತಹ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಯಾದವ್​ ಆರೋಪಿಸಿದರು.
ಉತ್ತರ ಪ್ರದೇಶದ ರಾಂಪುರ ಲೋಕಸಭಾ ಉಪಚುನಾವಣೆಯಲ್ಲಿ ಬಳಸಲಾದ ತಂತ್ರಗಳನ್ನು ಈಗ ಬಂಗಾಳದಲ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಲು ಪುನರಾವರ್ತಿಸಲಾಗುತ್ತಿದೆ ಎಂದು ಅಖಿಲೇಶ್ ಯಾದವ್ ವಿವರಿಸಿದರು. ಮತದಾರರು ಈ ಬಗ್ಗೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದ ಅವರು, ಅನ್ಯಾಯ ಮಾಡಲು ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುವವರನ್ನು ಮತಗಳ ಮೂಲಕವೇ ಸೋಲಿಸಬೇಕು ಎಂದು ಮನವಿ ಮಾಡಿದರು. ಇಂತಹ ಮಾದರಿಗಳನ್ನು ಭವಿಷ್ಯದಲ್ಲಿ ಉತ್ತರ ಪ್ರದೇಶದಲ್ಲೂ ಅಳವಡಿಸಿಕೊಳ್ಳಬಹುದು ಎಂದು ಎಚ್ಚರಿಸಿದ ಅವರು, ಜನರು ಜಾಗೃತರಾಗಿರಬೇಕು ಎಂದು ಮನವಿ ಮಾಡಿದರು(ಏಜೆನ್ಸೀಸ್​​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net