ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ನ ಹೀನಾಯ ಸೋಲಿನ ಬಳಿಕ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿದ್ದು, 2020 ರ ಚುನಾವಣೆಯಲ್ಲಿ 19 ಸ್ಥಾನಗಳನ್ನು ಗೆದಿದ್ದ ಕೈ ಪಾಳಯ, ಈ ಬಾರಿ ಕೇವಲ ಆರು ಸ್ಥಾನಗಳಿ ತೃಪ್ತಿಪಟ್ಟುಕೊಂಡಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಿರಿಯ ನಾಯಕರುಗಳು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು, ಈ ದೊಡ್ಡ ಮಟ್ಟದ ಸೋಲನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.