ನಟ ಅಕ್ಷಯ್ ಕುಮಾರ್ ಕಾರು ಅಪಘಾತ: ಕಾರು ಮತ್ತು ಆಟೋ ನಡುವೆ ಭೀಕರ ಡಿಕ್ಕಿ..
Akshay Kumar
Published on:
Copied
Follow Us
Akshay Kumar
ಸೋಮವಾರ ರಾತ್ರಿ ಜುಹು ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ನಟ ಅಕ್ಷಯ್ ಕುಮಾರ್ ಮತ್ತು ಅವರ ಪತ್ನಿ ಟ್ವಿಂಕಲ್ ಖನ್ನಾ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ರಾತ್ರಿ ಸುಮಾರು 8:45 ರಿಂದ 9 ಗಂಟೆಯ ವೇಳೆಗೆ ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ ವಿಮಾನ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರು ಜುಹುವಿನ ಗಾಂಧಿಗ್ರಾಮ್ ರಸ್ತೆಯ ಇಸ್ಕಾನ್ ದೇವಸ್ಥಾನದ ಬಳಿ ವೇಗವಾಗಿ ಬಂದು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸಮೀಪದ ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಮುಂಬೈ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಇನ್ನೂ ಅಧಿಕೃತ ಎಫ್‌ಐಆರ್ (FIR) ದಾಖಲಾಗಿಲ್ಲವಾದರೂ, ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದು ಅಕ್ಷಯ್ ಕುಮಾರ್ ಅವರ ಎಸ್ಕಾರ್ಟ್ ವಾಹನ ಎನ್ನಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಅಕ್ಷಯ್ ಕುಮಾರ್ ಅವರು ಸದ್ಯ 'ವೆಲ್ಕಮ್ ಟು ದಿ ಜಂಗಲ್' ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಈ ವರ್ಷದ ಕೊನೆಯಲ್ಲಿ ಸಿನಿಮಾ ತೆರೆಗೆ ಬರಲಿದೆ.