ಮಹಾರಾಷ್ಟ್ರ, ಬಿಹಾರ ಸೇರಿ ಕಳೆದ 2 ವರ್ಷಗಳಲ್ಲಿ ನಡೆದ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು: ಮಲ್ಲಿಕಾರ್ಜುನ ಖರ್ಗೆ | Mallikarjun Kharge

ಎಸ್​ಐಆರ್ ವಿರೋಧಿ ಪ್ರತಿಭಟನೆಗಳನ್ನು ದೇಶದ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 2 ವರ್ಷಗಳಲ್ಲಿ ನಡೆದ ಮಹಾರಾಷ್ಟ್ರ, ಬಿಹಾರ ಸೇರಿ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ, ಬಿಹಾರ ಸೇರಿ ಕಳೆದ 2 ವರ್ಷಗಳಲ್ಲಿ ನಡೆದ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು: ಮಲ್ಲಿಕಾರ್ಜುನ ಖರ್ಗೆ | Mallikarjun Kharge
Published on: 

ಪಾಟ್ನಾ: ಎಸ್​ಐಆರ್ ವಿರೋಧಿ ಪ್ರತಿಭಟನೆಗಳನ್ನು ದೇಶದ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಳೆದ 2 ವರ್ಷಗಳಲ್ಲಿ ನಡೆದ ಮಹಾರಾಷ್ಟ್ರ, ಬಿಹಾರ ಸೇರಿ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಹಾರದ ಮೊದಲ ಮುಖ್ಯಮಂತ್ರಿ ಶ್ರೀ ಬಾಬು ಎಂದೇ ಖ್ಯಾತರಾಗಿದ್ದ ಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖರ್ಗೆ, ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಿದ್ಧಾಂತವು ದೇಶದಲ್ಲಿ ವಿಭಜನೆಯನ್ನು ಹೆಚ್ಚಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಆರ್‌ಎಸ್‌ಎಸ್ ಸಿದ್ಧಾಂತವನ್ನು ನಿರ್ಮೂಲನೆ ಮಾಡದ ಹೊರತು, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂದು ಪ್ರತಿಪಾದಿಸಿರುವ ಅವರು, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Also Read
6 ತಿಂಗಳಲ್ಲಿ 23 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಜಡ್ಜ್​​ ಎತ್ತಂಗಡಿ: ಪ್ಯಾಮಿಲಿ ಕೋರ್ಟ್​ಗೆ ವರ್ಗಾಯಿಸಿ ಹೈಕೋರ್ಟ್ ಆದೇಶ | Judge transferred
ಮಹಾರಾಷ್ಟ್ರ, ಬಿಹಾರ ಸೇರಿ ಕಳೆದ 2 ವರ್ಷಗಳಲ್ಲಿ ನಡೆದ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು: ಮಲ್ಲಿಕಾರ್ಜುನ ಖರ್ಗೆ | Mallikarjun Kharge

ನಿತೀಶ್ ಕುಮಾರ್ ಅವರಂತಹ ಸಮಾಜವಾದಿ ನಾಯಕರು ಆರ್‌ಎಸ್‌ಎಸ್ ಸಿದ್ಧಾಂತದಲ್ಲಿ ನಂಬಿಕೆಯಿರುವ ಜನರೊಂದಿಗೆ ಕೈಜೋಡಿಸಿರುವುದು ನನಗೆ ನೋವುಂಟು ಮಾಡಿದೆ. ನಡೆಯುತ್ತಿರುವ ರಾಜಕೀಯ ಹ ಎಂದಿದ್ದಾರೆ.

ಬಿಜೆಪಿ ಮತ್ತು ಆರ್​​ಎಸ್ಎಸ್​ನವರು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿರುವ ಅವರು, ನಡೆಯುತ್ತಿರುವ ರಾಜಕೀಯ ಹೋರಾಟವನ್ನು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದಿದ್ದಾರೆ.

Also Read
ಕೊಹ್ಲಿ, ಜಸ್ಪ್ರೀತ್ ಬುಮ್ರಾಗೂ ಸಿಗಲಿಲ್ಲ ಸ್ಥಾನ... ಇದೇ ನೋಡಿ ರಹಾನೆಯ ಆಲ್​ ಟೈಂ ಬೆಸ್ಟ್​ ಭಾರತೀಯ ಟೆಸ್ಟ್ ತಂಡ! Ajinkya Rahane
ಮಹಾರಾಷ್ಟ್ರ, ಬಿಹಾರ ಸೇರಿ ಕಳೆದ 2 ವರ್ಷಗಳಲ್ಲಿ ನಡೆದ ಎಲ್ಲಾ ವಿಧಾನಸಭೆ ಚುನಾವಣೆಗಳನ್ನು ರದ್ದುಗೊಳಿಸಬೇಕು: ಮಲ್ಲಿಕಾರ್ಜುನ ಖರ್ಗೆ | Mallikarjun Kharge

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಬೆಂಬಲಿಸುವಂತೆ ಬಿಹಾರದ ಜನರನ್ನು ಒತ್ತಾಯಿಸಿದ ಅವರು, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿ 'ವೋಟ್ ಚೋರಿ' ಮೂಲಕ ಸರ್ಕಾರಗಳನ್ನು ರಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಮತ್ತು ಇದಕ್ಕೆ ಕಾರಣರಾದವರು ಜೈಲಿಗೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಭವಿಷ್ಯದ ಎಲ್ಲಾ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಬಳಸಿ ನಡೆಸಬೇಕು, ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಕಳೆದ ಎರಡು ವರ್ಷಗಳಿಂದ ನಡೆದ ವಿಧಾನಸಭಾ ಚುನಾವಣೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಚುನಾವಣಾ ಅಕ್ರಮಗಳು ಮತ್ತು 'ವೋಟ್ ಚೋರಿ' ಆರೋಪದ ಮೇಲೆ ಇಂಡಿಯಾ ಬ್ಲಾಕ್ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅ. 30, 31 ಮತ್ತು ನ. 1ರಂದು ದೆಹಲಿಯಲ್ಲಿ ಹಾಜರಿರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚಿಸಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net