ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಇಡಿ, ಸಿಬಿಐ ತನಿಖೆಗೆ ನೀಡಿದ್ದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್ | Rahul Gandhi

ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐ ಮತ್ತು ಇಡಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ(ನ. 26) ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಇಡಿ, ಸಿಬಿಐ ತನಿಖೆಗೆ ನೀಡಿದ್ದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್ | Rahul Gandhi
Published on: 

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐ ಮತ್ತು ಇಡಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಬುಧವಾರ(ನ. 26) ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಲೈವ್ ಲಾ ಪ್ರಕಾರ, ಬಿಜೆಪಿ ಸದಸ್ಯ ವಿಘ್ನೇಶ್ ಶಿಶಿರ್ ಸಲ್ಲಿಸಿದ ಅರ್ಜಿಯು ವಿಚಾರಣೆಗೆ ಅರ್ಹವೇ ಎಂಬ ಪ್ರಶ್ನೆಯೂ ಸೇರಿದಂತೆ, ಅರ್ಜಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ಹೈಕೋರ್ಟ್‌ನಲ್ಲಿ ರಾಹುಲ್ ಗಾಂಧಿ ಅವರ ವಾದವನ್ನು ಹೊಸದಾಗಿ ಆಲಿಸಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ಹೈಕೋರ್ಟ್‌ನ ನಿರ್ದೇಶನಗಳನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸುತ್ತಾ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಈ ಆದೇಶವನ್ನು ಹೊರಡಿಸಿದೆ.

Also Read
ತಿರುಪ್ಪರಂಕುಂದ್ರಂ ವಿವಾದ: ದೀಪ ಬೆಳಗಿಸದ್ದಕ್ಕೆ ಸುಪ್ರೀಂ​ನಲ್ಲಿ ಕ್ಷಮೆಯಾಚಿಸಿದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ | Supreme Court
ರಾಹುಲ್ ಗಾಂಧಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಇಡಿ, ಸಿಬಿಐ ತನಿಖೆಗೆ ನೀಡಿದ್ದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್ | Rahul Gandhi

ಈ ಹಿಂದೆ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣವನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ಗೆ ಸೂಚಿಸಿತ್ತು. ಮತ್ತು ಹೈಕೋರ್ಟ್ ನಿರ್ದೇಶನಗಳ ಅನುಸಾರವಾಗಿ ಯಾವುದೇ ವರದಿಯನ್ನು ಸಲ್ಲಿಸದಂತೆ ಸಿಬಿಐ ಮತ್ತು ಇಡಿಗೆ ನಿರ್ದೇಶನ ನೀಡಿತ್ತು.

ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅಲಹಾಬಾದ್ ಹೈಕೋರ್ಟ್​ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ರಾಹುಲ್ ತಮ್ಮ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಮತ್ತು ಅವರ ಕುಟುಂಬದ ಇತರ ಸದಸ್ಯರ ವಿರುದ್ಧ ತನಿಖೆ ನಡೆಸಬೇಕೆಂದು ಅವರು ಕೋರಿದ್ದಾರೆ (ಏಜೆನ್ಸೀಸ್).