ಅಧ್ಯಕ್ಷರ ಪುತ್ರಿಯರ ಆಯ್ಕೆ ಕೇವಲ ಸ್ವಜನಪಕ್ಷಪಾತಕ್ಕೆ ಸೀಮಿತವಾಗಿಲ್ಲ, ಬದಲಿಗೆ ಇದರಲ್ಲಿ ದೊಡ್ಡ ಮಟ್ಟದ ಕಾನೂನು ಉಲ್ಲಂಘನೆಯೂ ನಡೆದಿದೆ ಎಂಬ ಸಂಶಯಗಳು ವ್ಯಕ್ತವಾಗಿವೆ. ಪುತ್ರಿಯರ ಪೈಕಿ ಒಬ್ಬರು ಪಡೆದಿರುವ ಮೀಸಲಾತಿ ಅರ್ಹತೆಯೇ ಸಂಶಯಾಸ್ಪದವಾಗಿದೆ. ಸರ್ಕಾರ ನಿಗದಿಪಡಿಸಿರುವ ಆದಾಯದ ಮಾನದಂಡಗಳನ್ನು ಪೂರೈಸದಿದ್ದರೂ, ಸುಳ್ಳು ಮಾಹಿತಿಗಳನ್ನು ಒದಗಿಸಿ ಮೀಸಲಾತಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.