ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿರುವ ವದಂತಿಗಳ ಪ್ರಕಾರ, ಅಣ್ಣಾಮಲೈ ಬಿಜೆಪಿಯಿಂದ ಹೊರಬಂದು ಸ್ವತಂತ್ರ ರಾಜಕೀಯ ಹಾದಿಯನ್ನು ಹಿಡಿಯಲು ಯೋಜಿಸುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಅವರ ಕಡೆಯಿಂದ ಇದುವರೆಗೆ ಯಾವುದೇ ಅಧಿಕೃತ ಬಹಿರಂಗ ಹೇಳಿಕೆಗಳು ಹೊರಬಿದ್ದಿಲ್ಲ. ಇನ್ನು, ಈ ಇಡೀ ಬೆಳವಣಿಗೆಯ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ, ದಯವಿಟ್ಟು ಇನ್ನೂ ಎರಡು ದಿನ ಕಾಯಿರಿ, ನಾವು ಸಮಾಧಾನವಾಗಿ ಕುಳಿತು ಮಾತನಾಡೋಣ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.