ಪಶ್ಚಿಮ ಬಂಗಾಳದ ಹೂಗ್ಲಿಯ ಮಹಿಳಾ ಬಿಎಲ್‌ಒ ಒಬ್ಬರು ಕೆಲಸದ ಹೊರೆ ಅಸಹನೀಯವಾಗಿದೆ ಎಂಬ ಹೇಳಿಕೆ ನೀಡಿದ್ದು, ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಆಕೆ, ತಮ್ಮ ನಾಲ್ಕು ವರ್ಷದ ಮಗಳು ಸೇರಿದಂತೆ ತಮ್ಮ ಕುಟುಂಬಕ್ಕೆ ಸಮಯವನ್ನು ನೀಡಲಾಗದೆ, ಗಣತಿ ನಮೂನೆಗಳನ್ನು ಸಂಗ್ರಹಿಸುವುದರಲ್ಲಿಯೇ ಇಡೀ ದಿನಗಳನ್ನು ಕಳೆಯುವಂತಾಗಿದೆ ಎಂದರು. ಈ ಪ್ರಕ್ರಿಯೆಯ ಬಗ್ಗೆ ಜನರು ಗೊಂದಲಕ್ಕೊಳಗಾಗಿದ್ದಾರೆ ಮತ್ತು ಭಯಭೀತರಾಗಿದ್ದಾರೆ, ಆದ್ದರಿಂದ ನಾವು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.