1992 ರಲ್ಲಿ ‘ಚೆಂಬರುತಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರೋಜಾ, ರಜನಿಕಾಂತ್ ಸೇರಿದಂತೆ ದಕ್ಷಿಣದ ಬಹುತೇಕ ಎಲ್ಲಾ ಸೂಪರ್ ಸ್ಟಾರ್‌ಗಳ ಜೊತೆ ನಟಿಸಿ ಯಶಸ್ವಿ ನಟಿಯಾಗಿ ಗುರುತಿಸಿಕೊಂಡಿದ್ದರು. ನಂತರ ರಾಜಕೀಯ ಪ್ರವೇಶಿಸಿದ ಅವರು ಆಂಧ್ರಪ್ರದೇಶದಲ್ಲಿ ಶಾಸಕಿಯಾಗಿ ಹಾಗೂ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ‘ಲೆನಿನ್ ಪಾಂಡಿಯನ್’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಮರಳಿರುವ ಅವರು, ಈಗ ಮಗಳ ಅಂತರಾಷ್ಟ್ರೀಯ ಮಟ್ಟದ ಸಾಧನೆಯಿಂದಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ,(ಏಜೆನ್ಸೀಸ್).