ಪಕ್ಷದೊಳಗೆ ಭಿನ್ನಮತ ಇರುವುದನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಆಪ್ತ ಕುನಾಲ್ ಘೋಷ್ ಸೋಮವಾರ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ನಮ್ಮ ಟಿಎಂಸಿ ಶಾಸಕರಿಗೆ ಪೊಲೀಸ್ ಪ್ರಭಾವ ಬಳಸಿ ಬೆದರಿಕೆ ಹಾಕಲಾಗುತ್ತಿದೆ ಮತ್ತು ನಿರ್ದಿಷ್ಟ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿರುವಂತೆ ಸೂಚಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮತ್ತೊಂದೆಡೆ ಕುನಾಲ್ ಘೋಷ್, ಬಂಡಾಯ ಶಾಸಕರು ದಾರಿ ತಪ್ಪಬಾರದು ಎಂದು ಕೈಮುಗಿದು ಮನವಿ ಮಾಡಿದ್ದಾರೆ. ಅಲ್ಲದೆ, ಪಕ್ಷದ ನಾಯಕತ್ವಕ್ಕೆ ತಿಳಿಸದೆ ರಿತಬ್ರತಾ ರಹಸ್ಯ ಸಭೆಗಳನ್ನು ಆಯೋಜಿಸಿ ಪಕ್ಷವನ್ನು ಇಬ್ಬಾಗ ಮಾಡಲು ಯತ್ನಿಸುತ್ತಿದ್ದಾರೆ ಎಂದು ಘೋಷ್ ನೇರ ಆರೋಪ ಮಾಡಿದ್ದಾರೆ.