ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬ ವಿಷಯವಾಗಿ ಇನ್ನು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲವಾದರೂ, ಮಾಲ್ಡಾ, ಮುರ್ಷಿದಾಬಾದ್, ಬಿರ್ಭುಮ್, ಉತ್ತರ ಮತ್ತು ದಕ್ಷಿಣ ದಿನಾಜ್‌ಪುರ ಮತ್ತು ಕೋಲ್ಕತ್ತಾದ ಕೆಲವು ಸ್ಥಾನಗಳು ಸೇರಿದಂತೆ ದಕ್ಷಿಣ ಬಂಗಾಳದ ಕೆಲವು ಸ್ಥಳಗಳಲ್ಲಿ ಎಐಎಂಐಎಂ ಬಲಿಷ್ಟ ನೆಲೆ ಹೊಂದಿದ್ದು, ಅಲ್ಪಸಂಖ್ಯಾತರ ಮತಗಳಿಂದ ಗೆದ್ದಿರುವ ಬ್ಯಾನರ್ಜಿ ಆ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂದು ಸೋಲಂಕಿ ಆರೋಪಿಸಿದ್ದಾರೆ