ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಕುಂಕುಮ್ ಮೊಹೋದ್, ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ | Kumkum Mohod

ಜಪಾನ್​ಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, ಶನಿವಾರ(ಅ. 03) ಮಹಿಳೆಯರ ವೈಯಕ್ತಿಕ ರಿಕರ್ವ್ ಬಿಲ್ಲುಗಾರಿಕೆ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ಯುವ ಬಿಲ್ಲುಗಾರ್ತಿ ಕುಂಕುಮ್ ಮೊಹೋದ್ ಇತಿಹಾಸ ಸೃಷ್ಟಿಸಿದ್ದಾರೆ. ಮತ್ತು ವೈಯಕ್ತಿಕ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕುಂಕುಮ್ ಮೊಹೋದ್
ಕುಂಕುಮ್ ಮೊಹೋದ್
Published on: 

Kumkum Mohod: ಜಪಾನ್​ಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಬೇಟೆ ಮುಂದುವರಿದಿದ್ದು, ಶನಿವಾರ(ಅ. 03) ಮಹಿಳೆಯರ ವೈಯಕ್ತಿಕ ರಿಕರ್ವ್ ಬಿಲ್ಲುಗಾರಿಕೆ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ಯುವ ಬಿಲ್ಲುಗಾರ್ತಿ ಕುಂಕುಮ್ ಮೊಹೋದ್ ಇತಿಹಾಸ ಸೃಷ್ಟಿಸಿದ್ದಾರೆ. ಮತ್ತು ವೈಯಕ್ತಿಕ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಂದ್ಯಾವಳಿಯ ಆರಂಭದಿಂದಲೂ ಅದ್ಭುತ ಪ್ರದರ್ಶನ ನೀಡುತ್ತಿರುವ ಕುಂಕುಮ್, ನಿರ್ಣಾಯಕ ಪಂದ್ಯದಲ್ಲಿ ಅದೇ ವೇಗ ಮುಂದುವರೆಸಿ ಚಿನ್ನವನ್ನು ಮುಡಿಗೇರಿಸಿಕೊಂಡಿದ್ದಾರೆ. ರೋಮಾಂಚಕ ಫೈನಲ್ ಪಂದ್ಯದಲ್ಲಿ ಕೊರಿಯಾದ ಯುಜೀನ್ ವಿರುದ್ಧ 10-ಪಾಯಿಂಟ್ ಶಾಟ್‌ನೊಂದಿಗೆ ಗೆಲುವು ಸಾಧಿಸಿದರು.

ಈ ಗೆಲುವಿನೊಂದಿಗೆ, ಕುಂಕುಮ್ ಮೊಹೂದ್ ಅವರಿಗೆ ಮತ್ತೊಂದು ಅಪರೂಪದ ಅವಕಾಶ ಸಿಕ್ಕಿದೆ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಭಾರತಕ್ಕೆ ವೈಯಕ್ತಿಕ ವಿಭಾಗದಲ್ಲಿ ಸ್ಥಾನವನ್ನು ಪಡೆದಿದ್ದಾರೆ. ಇನ್ನೂ ಕುಂಕುಮ್ ಏಷ್ಯನ್ ಕ್ರೀಡಾಕೂಟದಲ್ಲಿ ಎರಡು ಚಿನ್ನಗಳನ್ನು ಗೆಲ್ಲುವ ಮೂಲಕ ಮೂರಕ್ಕೆ ಏರಿಸಿಕೊಂಡಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net