ಉಮರ್ ಖಾಲಿದ್, ಶಾರ್ಜೀಲ್ ಇಮಾಮ್​ಗೆ ಜಾಮೀನು ನಿರಾಕರಣೆ: ಬೆಂಬಲ ನೀಡಿದ್ದಕ್ಕೆ ಕಾಂಗ್ರೆಸ್ ಕ್ಷಮೆಯಾಚಿಸಲಿ ಎಂದು ಬಿಜೆಪಿ ಕಿಡಿ | BJP

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್
Published on
ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್​ಗೆ ಇಂದು(ಜ. 05) ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಇದೇ ವೇಳೆ ತುಕ್ಡೆ-ತುಕ್ಡೇ ಗ್ಯಾಂಗ್​ ಅನ್ನು ಬೆಂಬಲಿಸಿದ ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕೆಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಉಮರ್ ಖಾಲಿದ್ ಮತ್ತು ಶಾರ್ಜಿಲ್ ಇಮಾಮ್ ಅವರನ್ನು ಭಾರತದ ವಿಭಜಕ ಶಕ್ತಿಗಳ ಪೋಸ್ಟರ್ ಬಾಯ್​ಗಳು ಎಂದು ಕರೆದಿರುವ ಬಿಜೆಪಿ, ಕಾಂಗ್ರೆಸ್ ಪಕ್ಷ ಮತ್ತು ಅದರ ವ್ಯವಸ್ಥೆಯೂ ಅವರನ್ನು ರಕ್ಷಿಸಲು ಮುಗ್ದರು ಎಂದು ಬಿಂಬಿಸಿತ್ತು ಎಂದು ಕಿಡಿಕಾರಿದೆ.
ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ, ಸುಪ್ರೀಂಕೋರ್ಟ್​ನ ತೀರ್ಪು ಸತ್ಯಮೇವ ಜಯತೇ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ್ದು, ಮೇಲ್ನೋಟಕ್ಕೆ ಆರೋಪಗಳು ನಿಜ ಎಂಬುದನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ಅಫ್ಜಲ್‌ನಿಂದ ಉಮರ್ ಮತ್ತು ಶಾರ್ಜೀಲ್‌ವರೆಗಿನ ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಬೆಂಬಲ ನೀಡಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್​​

2020ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಸಾಂವಿಧಾನಿಕ ಪೀಠವು, ಖಾಲಿದ್ ಮತ್ತು ಇಮಾಮ್ ಅವರಿಗೆ ಜಾಮೀನು ನೀಡಲು ಸೋಮವಾರ(ಜ. 05) ನಿರಾಕರಿಸಿದೆ. ಈ ಇಬ್ಬರು ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಸಾಕಷ್ಟು ಪುರಾವೆಗಳನ್ನು ಪ್ರಾಸಿಕ್ಯೂಷನ್ ನೀಡಿದೆ ಎಂದು ಹೇಳಿದೆ.
ಆದಾಗ್ಯೂ, ಪ್ರಕರಣದಲ್ಲಿ ಕಾರ್ಯಕರ್ತರಾದ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ನೀಡಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net