

ನವದೆಹಲಿ: 2020 ರಂದು ದೆಹಲಿಯಲ್ಲಿ ನಡೆದಿದ್ದ ಗಲಭೆ ಹಾDelhiRiots ಗೂ ಹಿಂಸಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಉಮರ್ ಖಾಲೀದ್ ಹಾಗೂ ಶರ್ಜೀಲ್ ಇಮಾಮ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮತ್ತೊಮ್ಮೆ ನಿರಾಕರಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ತಿಹಾರ್ ಜೈಲಿನಲ್ಲಿರುವ ಇವರಿಬ್ಬರಿಗೆ ಜಾಮೀನು ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಜಾಮೀನನ್ನು ನೀಡಲು ನಿರಾಕರಿಸಿ, ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.
ಇಂದು ನಡೆದ ವಿಚಾರಣೆಯಲ್ಲಿ ಉಮರ್ ಖಾಲೀದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಶರ್ಜೀಲ್ ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ಆರೋಪಿಗಳಿಗೆ ಮಧ್ಯಂತರ ಜಾಮೀನನ್ನು ನೀಡುವಂತೆ ನ್ಯಾಯಪೀಠದಲ್ಲಿ ಮನವಿ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಜ. ಸೂರ್ಯಕಾಂತ್, ಜ. ಜಾಯ್ಮಾಲ್ಯ ಬಾಗ್ಚಿ ಮತ್ತು ಜ. ವಿ. ಮೋಹನ ಅವರ ನ್ಯಾಯಪೀಠ ಇಂದು ಜಾಮೀನನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತು. ಹಾಗೆಯೇ, ಆರೋಪಿಗಳಿಗೆ ಮಧ್ಯಂತರ ಜಾಮೀನನ್ನು ನೀಡುವ ಬಗ್ಗೆ ಅಭಿಪ್ರಾಯ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿ ಅರ್ಜಿ ವಿಲೇವಾರಿ ಮಾಡಿತು.
ಇನ್ನು ಆರೋಪಿಗಳ ಪರ ವಾದ ಮಂಡಿಸಿದ ವಕೀಲರು, ಈ ಪ್ರಕರಣದ ಪ್ರಮುಖ ಆರೋಪಿಗಳಾದ ಉಮರ್ ಖಾಲೀದ್ ಹಾಗೂ ಶರ್ಜೀಲ್ ಇಮಾಮ್ ರನ್ನು ಸುಮಾರು 6 ವರ್ಷಗಳಿಂದ ಜೈಲಿನಲ್ಲಿಡಲಾಗಿದೆ. ಆದರೆ, ಕಳೆದೊಂದು ವರ್ಷದಿಂದ ಈ ಪ್ರಕರಣಕ್ಕೆ ಸಂಬಂಧಿಸಿದ ಒಂದೇ ಒಂದು ಸಾಕ್ಷಿಯ ವಿಚಾರಣೆ ನಡೆದಿಲ್ಲ.
ಒಂದು ವರ್ಷದ ನಿರ್ಬಂಧದ ಅವಧಿ ಮುಗಿದ ನಂತರವೂ ಬಂಧನದಲ್ಲಿ ಮುಂದುವರಿಸುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದಾರೆ.
ಪ್ರಾಸಿಕ್ಯೂಷನ್ ಸಂರಕ್ಷಿತ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸುವಲ್ಲಿ ವಿಫಲವಾಗಿದೆ ಮತ್ತು ಸುಪ್ರೀಂ ಕೋರ್ಟ್ ವಿಧಿಸಿದ್ದ ಒಂದು ವರ್ಷದ ನಿರ್ಬಂಧದ ಅವಧಿ ಮುಗಿಯುವ ಹಂತದಲ್ಲಿದೆ ಹೀಗಾಗಿ, ಆರೋಪಿಗಳಿಗೆ ಮಧ್ಯಂತರ ಜಾಮೀನನ್ನು ನೀಡಬಹುದು ಎನ್ನವುದು ಆರೋಪಿಗಳ ಪರ ವಕೀಲರ ವಾದವಾಗಿದೆ, (ಏಜೆನ್ಸೀಸ್).