ಅಜಂ ಖಾನ್​ಗೆ ಜಾಮೀನು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಇಡಿ: ತುರ್ತು ವಿಚಾರಣೆಗೆ ನಿರಾಕರಣೆ | Azam Khan

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ(ನ. 18) ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದೆ.
ಅಜಂ ಖಾನ್
ಅಜಂ ಖಾನ್
Published on: 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ(ನ. 18) ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ವಿಚಾರಣೆಗೆ ಒಪ್ಪಿದ್ದು, ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದೆ.

ಇಡಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್. ವಿ. ರಾಜು, ಈ ಅರ್ಜಿಯ ತುರ್ತು ವಿಚಾರಣೆಗೆ ಕೋರಿದರು. ಮತ್ತು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

Also Read
ಸೋನಿಯಾ ಪುಸ್ತಕ ವಿರೋಧಿಸುವ ಭರದಲ್ಲೇ ಬಾಳಾ ಸಾಹೇಬ್ ಠಾಕ್ರೆ ಫೋಟೋ ಹರಿದ ಶಿವಸೇನೆ ನಾಯಕಿ: ಉದ್ಧವ್ ಸೇನೆ ಕಿಡಿ | Balasaheb Thackeray
ಅಜಂ ಖಾನ್

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ್, ಅವರು ಜಾಮೀನಿನ ಮೇಲೆ ಹೊರಗಿದ್ದರೇ ಸ್ವರ್ಗವೇನು ಕುಸಿದು ಬೀಳುವುದಿಲ್ಲ. ಅವರು ಮಧ್ಯಂತರ ಜಾಮೀನಿನ ಮೇಲೆಯೇ ಇರಲಿ ಹೇಳಿದರು. ಮತ್ತು ನಾಳೆಗೆ ಈ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ತಿಳಿಸಿದರು.

ಅಲಹಾಬಾದ್ ಹೈಕೋರ್ಟ್ ಜಾಮೀನು

ನವೆಂಬರ್ 17ರಂದು, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಅಜಂ ಖಾನ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ವಿಚಾರಣೆಯ ಸಮಯದಲ್ಲಿ, ಖಾನ್ ಅವರನ್ನು ಬಂಧಿಸಲು ಕಡ್ಡಾಯ ಕಾರ್ಯವಿಧಾನವನ್ನು ಜಾರಿ ನಿರ್ದೇಶನಾಲಯ ಅನುಸರಿಸಿಲ್ಲ ಎಂಬುದನ್ನು ಗಮನಿಸಿತು. ಮತ್ತು ಬಂಧನಕ್ಕೆ ಲಿಖಿತ ಆಧಾರಗಳನ್ನು ಅವರಿಗೆ ಒದಗಿಸಲಾಗಿಲ್ಲ ಎಂದು ಹೇಳಿ ಮಧ್ಯಂತರ ಜಾಮೀನು ನೀಡಿತ್ತು (ಏಜೆನ್ಸೀಸ್).