ನ್ಯೂಜಿಲೆಂಡ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ...ಕಿವೀಸ್ ಬೇಟೆಗೆ ಸಜ್ಜಾಯ್ತು ಬಲಿಷ್ಠ ಪಡೆ! ಇಲ್ಲಿದೆ ನೋಡಿ ಸಂಪೂರ್ಣ ಲಿಸ್ಟ್! | Ind Vs Nz

Ind Vs Nz | ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
Ind Vs Nz | ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
Published on
Ind Vs Nz: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದ್ದು, ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿರೀಕ್ಷೆಯಂತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ಈಗಾಗಲೇ ಟಿ20 ತಂಡವನ್ನು ಘೋಷಿಸಿದ್ದು, ಈಗ ಏಕದಿನ ತಂಡವನ್ನೂ ಪ್ರಕಟಿಸಿದೆ. ಅಚ್ಚರಿ ಎಂಬಂತೆ ಶ್ರೇಯಸ್ ಅಯ್ಯರ್​​ರನ್ನು ಏಕದಿನ ಸರಣಿಗೆ ಉಪನಾಯಕನನ್ನಾಗಿ ನೇಮಕ ಮಾಡಲಾಗಿದ್ದು, ಅವರು ಆಟದ ಕುರಿತಾದ ತೀರ್ಮಾನ ಅವರ ಫಿಟ್‌ನೆಸ್‌ಗೆ ಮೇಲೆ ನಿರ್ಧಾರವಾಗುತ್ತದೆ. ಈ ವೇಳೆ ಎರಡೂ ತಂಡಗಳು ಮೂರು ಏಕದಿನ ಪಂದ್ಯ ಮತ್ತು ಐದು ಟಿ20ಐಗಳಲ್ಲಿ ಪರಸ್ಪರ ಸೆಣಸಲಿವೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಗಂಭೀರ ಗಾಯದ ಸಮಸ್ಯೆಗೆ ತುತ್ತಾಗಿದ್ದ ಅಯ್ಯರ್ ಅಂದಿನಿಂದ ಮೈದಾನದಿಂದ ದೂರವೇ ಉಳಿದಿದ್ದರು. ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್, ಆಲ್​ರೌಂಡರ್​ ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ರಿಷಭ್ ಪಂತ್ ಕೂಡ ಸ್ಥಾನ ಪಡೆದಿದ್ದಾರೆ. 

ಹಾರ್ದಿಕ್ ಪಾಂಡ್ಯ ಔಟ್​

ಮುಂಬರುವ ಟಿ20 ವಿಶ್ವಕಪ್​ ಗಮನದಲ್ಲಿಟ್ಟುಕೊಂಡಿರುವ ಆಡಳಿತ ಮಂಡಳಿ ರಿಸ್ಕ್​ ತೆಗೆದುಕೊಳ್ಳಲು ಹಿಂದೇಟು ಹಾಕಿದ್ದ, ಕೆಲಸದ ಹೊರೆ ತಗ್ಗಿಸುವ ಉದ್ದೇಶದಿಂದಲೂ ಸಹ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಕೈ ಬಿಡಲಾಗಿದೆ. ಶ್ರೇಯಸ್ ಅಯ್ಯರ್ ಲಭ್ಯತೆಯು ಬಿಸಿಸಿಐ ಸಿಒಇಯಿಂದ ಫಿಟ್ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ. ಹಾರ್ದಿಕ್ ಪಾಂಡ್ಯ ಅವರಿಗೆ ಪಂದ್ಯದಲ್ಲಿ 10 ಓವರ್‌ಗಳನ್ನು ಬೌಲಿಂಗ್ ಮಾಡಲು ಬಿಸಿಸಿಐ ಸಿಒಇ ಅನುಮತಿ ನೀಡಿಲ್ಲ, ಐಸಿಸಿ ಟಿ20 ವಿಶ್ವಕಪ್ ಪರಿಗಣಿಸಿ, ಪಾಂಡ್ಯ ಕೆಲಸದ ಹೊರೆಯನ್ನು ನಿರ್ವಹಿಸಲಾಗುತ್ತಿದೆ ಎಂದು ಬಿಸಿಸಿಐ 15 ಸದಸ್ಯರ ತಂಡದೊಂದಿಗೆ ಹೇಳಿಕೆ ಬಿಡುಗಡೆ ಮಾಡಿದೆ(ಏಜೆನ್ಸೀಸ್​).
ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್(ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ರಿಷಬ್​ ಪಂತ್ (ವಿಕೆಟ್​ ಕೀಪರ್​)​, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್, ನಿತೀಶ್​ ಕುಮಾರ್​ ರೆಡ್ಡಿ, ಆರ್ಷ್‌ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net