ಬಾಂಗ್ಲಾ ವೇಗಿಗೆ ಬಿಸಿಸಿಐ ಬ್ರೇಕ್...ಮುಸ್ತಾಫಿಜುರ್ ಕೈ ಬಿಡುವಂತೆ ಕೆಕೆಆರ್​ಗೆ ಸೂಚನೆ | Mustafizur Rahman

Mustafizur Rahman | ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್
Mustafizur Rahman | ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್
Published on
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ಹಿಂಸಾಚಾರ, ಗುಂಪು ಹತ್ಯೆ ಮತ್ತು ಇಸ್ಕಾನ್​​ಗೆ ಸಂಬಂಧಿಸಿದ ವಿವಾದಗಳು ದೇಶದ ಜನರಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿದ್ದು, ಇಂತಹ ಸಮಯದಲ್ಲಿ ಬಾಂಗ್ಲಾ ಮೂಲದ ಆಟಗಾರನಿಗೆ ಐಪಿಎಲ್​ನಲ್ಲಿ ಅವಕಾಶ ನೀಡಿರುವುದು ಸರಿಯಲ್ಲ ಎಂದು ಅನೇಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಷಯದಲ್ಲಿ ಮತ್ತೆ ಮಧ್ಯೆ ಪ್ರವೇಶಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ, ಮುಸ್ತಾಫಿಜುರ್ ರೆಹಮಾನ್​​ರನ್ನು ತಂಡದಿಂದ ಕೈ ಬಿಡುವಂತೆ ಕೇಳಿಕೊಂಡಿದ್ದಾರೆ. ಕಳೆದ ತಿಂಗಳು ನಡೆದಿದ್ದ ಹರಾಜಿನಲ್ಲಿ ಕೆಕೆಆರ್ ತಂಡ ಎಡಗೈ ವೇಗಿ ಮುಸ್ತಾಫಿಜುರ್ ರೆಹಮಾನ್​ರನ್ನು 9.2 ಕೋಟಿ ರೂ.ಗೆ ಖರೀದಿಸಿತ್ತು.
ದೇಶ್ಯಾದ್ಯಂತ ವ್ಯಕ್ತವಾಗುತ್ತಿರುವ ಆಕ್ರೋಶದಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಬಿಸಿಸಿಐ, ಮುಸ್ತಾಫಿಜುರ್ ರೆಹಮಾನ್​ರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಫ್ರಾಂಚೈಸಿ ಸೂಚನೆ ನೀಡಿದ್ದು, ಅವರು ಬದಲು ಯಾವುದೇ ಆಟಗಾರನನ್ನು ಕೇಳಿದರೆ ಬಿಸಿಸಿಐ ಆ ಆಟಗಾರನಿಗೆ ಅವಕಾಶ ನೀಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ. ಬಾಂಗ್ಲಾದೇಶಿ ಆಟಗಾರರು ಭಾಗವಹಿಸುವ ಬಗ್ಗೆ ಬಿಜೆಪಿ ನಾಯಕ ಕೌಸ್ತವ್ ಬಾಗ್ಚಿ ಸಾರ್ವಜನಿಕವಾಗಿ ಆಕ್ಷೇಪಣೆ ವ್ಯಕ್ತಪಡಿಸಿದ ಬಳಿಕ ಮುಸ್ತಾಫಿಜುರ್ ಸೇರ್ಪಡೆಯ ಸುತ್ತಲಿನ ವಿವಾದವು ವೇಗ ಪಡೆದುಕೊಂಡಿತು. ಅನೇಕರು ಕೆಕೆಆರ್ ಮಾಲೀಕ ಮತ್ತು ಬಾಲಿವುಡ್ ನಟ ಶಾರುಖ್ ಖಾನ್ ವಿರುದ್ಧವು ವಾಗ್ದಾಳಿ ನಡೆಸಿದರು.
ಬಿಸಿಸಿಐ ನಿನ್ನೆ ಹೇಳಿದ್ದೇನು..?
ಬಾಂಗ್ಲಾ ಆಟಗಾರರನ್ನು ಐಪಿಎಲ್‌ನಿಂದ ನಿಷೇಧಿಸಬೇಕೆಂಬ ಕೂಗು ಹೆಚ್ಚಾದ ಹಿನ್ನಲೆಯಲ್ಲಿ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಇದುವರೆಗೆ ಬಾಂಗ್ಲಾದೇಶಿ ಆಟಗಾರರನ್ನು ಐಪಿಎಲ್‌ನಲ್ಲಿ ಭಾಗವಹಿಸದಂತೆ ನಿಷೇಧಿಸುವ ಯಾವುದೇ ಪ್ರಸ್ತಾವನೆ ಸರ್ಕಾರದಿಂದ ನಮಗೆ ಬಂದಿಲ್ಲ. ಇಂಥಾ ವಿಷಯದಲ್ಲಿ ನಾವು ತೊಡಗಬಾರದು ಎಂಬುದು ನಮ್ಮ ಕೈಯಲ್ಲಿಲ್ಲ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕಷ್ಟಸಾಧ್ಯ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಇನ್‌ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net