Babri Masjid | ವಿರೋಧದ ಮಧ್ಯೆ ಬಾಬರಿ ಮಸೀದಿ ಮಾದರಿಯ ಕಟ್ಟಡಕ್ಕೆ ಇಂದು ಶಿಲಾನ್ಯಾಸ, ಜಿಲ್ಲೆಯಾದ್ಯಂತ ಹೈ ಅಲರ್ಟ್​

Babri Masjid | ಬಾಬರಿ ಮಸೀದಿಯ ಪೋಸ್ಟರ್​
Babri Masjid | ಬಾಬರಿ ಮಸೀದಿಯ ಪೋಸ್ಟರ್​
Published on
ಕೊಲ್ಕತ್ತಾ: ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಯನ್ನು ಹೋಲುವಂತಹ ಮತ್ತೊಂದು ಕಟ್ಟಡಕ್ಕೆ ಉಚ್ಛಾಟಿತ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಲಿದ್ದು, ಈ ಹಿನ್ನಯೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.
ಸುಮಾರು 33 ವರ್ಷಗಳ ಹಿಂದೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯನ್ನು ಕೆಡವಿದ ದಿನದಂದೇ ಈ ಕಾರ್ಯಕ್ರಮ ಆಯೋಜಿಸಿರುವುದು ಸದ್ಯ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಇದೇ ವಿಷಯವಾಗಿ ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಕಬೀರ್​, ಹೈಕೋರ್ಟ್ ತೀರ್ಪಿನಲ್ಲಿ, ಕೆಲವರು ನನ್ನನ್ನು ತಡೆಯಲು ಪ್ರಯತ್ನಿಸಿದರು. ನನ್ನ ಹಕ್ಕನ್ನು ಎತ್ತಿಹಿಡಿಯಬೇಕು ಎಂದು ಹೈಕೋರ್ಟ್ ನ್ಯಾಯಾಧೀಶರು ಸ್ಪಷ್ಟವಾಗಿ ಹೇಳಿದ್ದಾರೆ. ಇಷ್ಟೊಂದು ಜನರು ಬರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಅವರು ರಾಜ್ಯ ಆಡಳಿತ ಮತ್ತು ಪೊಲೀಸ್ ಆಡಳಿತಕ್ಕೆ ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ಸುಮಾರು ಎರಡು ಗಂಟೆಗಳ ಕಾಲ ಕುರಾನ್ ಪಠಣದ ಬಳಿಕ ಶಿಲನ್ಯಾಸ ನಡೆಸಲಾಗುವುದು ಎಂದು ಅವರು ಈ ವೇಳೆ ತಿಳಿಸಿದ್ದಾರೆ.

ರಾಜಕೀಯ ವಿವಾದಕ್ಕೆ ಕಾರಣವಾದ ಕಬೀರ್ ನಡೆ..

ಕಬೀರ್ ಮಸೀದಿ ಶಿಲಾನ್ಯಾಸ ಮಾಡುವ ನಿರ್ಧಾರವನ್ನು ಕಳೆದ ತಿಂಗಳು ಘೋಷಿಸಿದ್ದರು, ಇದು ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಯಿತು. ಚುನಾವಣೆಗೂ ಮುನ್ನ ಟಿಎಂಸಿ ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್, ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದ್ದು, ನ್ಯಾಯಾಲಯವು ಇದಕ್ಕೆ ಅವಕಾಶ ನೀಡಿದ್ದರೂ, ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪಿತೂರಿಯ ಭಾಗವಾಗಿದೆ. ತಮ್ಮ ಟಿಎಂಸಿ ಶಾಸಕ ಹುಮಾಯೂನ್ ಕಬೀರ್​​ಗೆ ಬೆಂಬಲವಾಗಿ ನಿಂತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುರ್ಷಿದಾಬಾದ್‌ನಲ್ಲಿ ಜನಸಂದಣಿ, ಬಿಗಿ ಭದ್ರತೆ

ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿ ಮಾದರಿಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವ ಕಬೀರ್ ನಿರ್ಧಾರದ ಬಳಿಕ ಜಿಲ್ಲೆಗೆ ದೊಡ್ಡ ಜನಸಮೂಹ ಆಗಮಿಸಲು ಪ್ರಾರಂಭಿಸಿದ್ದು, ಈ ಕಾರ್ಯಕ್ರಮದಲ್ಲಿ ಮೂರು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ಗಮನಿಸಿ, ಮುರ್ಷಿದಾಬಾದ್‌ನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಹೆದ್ದಾರಿ 12 ರ ಎರಡೂ ಬದಿಗಳಲ್ಲಿ ಆರ್‌ಎಎಫ್, ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ

ಮಮತಾ ಬ್ಯಾನರ್ಜಿ, ಮಾಜಿ...

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್, ಪಶ್ಚಿಮ ಬಂಗಾಳದ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 2026 ರ ವಿಧಾನಸಭಾ ಚುನಾವಣೆಯ ಬಳಿಕ ಮಾಜಿಯಾಗಲಿದ್ದಾರೆ, ಅವರು ಇನ್ನು ಮುಂದೆ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಹೇಳಿದ್ದರು.(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net