

ಟೆಲ್ ಅವೀವ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗುರುವಾರ(ಅ. 22) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಇಸ್ರೇಲ್‌ನಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಸ್ವತಃ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ನೆತನ್ಯಾಹು, ನಾನು ನನ್ನ ಸ್ನೇಹಿತ ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಭಾರತೀಯ ಪೈಲಟ್ ಮತ್ತು ಕ್ಯಾಪ್ಟನ್ ಸ್ಮಿತ್ ಮಾಚರ್ ಅವರೊಂದಿಗೆ ಇಸ್ರೇಲ್‌ನ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವಂತೆ ನಾನು ಅವರನ್ನು ಕೇಳಿದೆ. ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ ಎಂದು ಹೇಳಿದ್ದಾರೆ.
ಮುಂದುವರೆದು, ಭಾರತ ಮತ್ತು ಇಸ್ರೇಲ್ ಎರಡೂ ಒಟ್ಟಾಗಿ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿವೆ. ನಮ್ಮ ನಡುವಿನ ಬಲವಾದ ಮತ್ತು ದಶಕಗಳಷ್ಟು ಹಳೆಯದಾದ ಸಂಬಂಧಗಳನ್ನು ಗಟ್ಟಿಯಾಗಿರುವುದಕ್ಕೆ ಮತ್ತು ನಮ್ಮ ನಡುವಿನ ಧೈರ್ಯಶಾಲಿ ಮತ್ತು ದೀರ್ಘಕಾಲೀನ ಸಂಬಂಧಕ್ಕಾಗಿ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಸಹ ಎಕ್ಸ್ನಲ್ಲಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ದೂರವಾಣಿ ಮೂಲಕ ಮಾತನಾಡಿದೆ. ನಮ್ಮ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಮತ್ತು ನಮ್ಮ ಪಾಲುದಾರಿಕೆಯನ್ನು ಬಲಪಡಿಸುವ, ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಅಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ತುರ್ತು ಅಗತ್ಯವನ್ನು ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ (ಏಜೆನ್ಸೀಸ್).