ಕೋಲ್ಕತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ತೃಣಮೂಲ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತದ ಸ್ಫೋಟ ಮುಗಿಲು ಮುಟ್ಟಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ, ಕೋಲ್ಕತಾ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಹಾಲಿ ಶಾಸಕ ಫಿರ್ಹಾದ್ ಹಕೀಮ್(Firhad Hakim) ಅವರು ಸಿಎಂ ಸುವೇಂದು ಅಧಿಕಾರಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ನಾವೆಲ್ಲರೂ ಬಿಜೆಪಿಯ ಜೊತೆಗೂಡಿ ಕೆಲಸ ಮಾಡಲಿದ್ದೇವೆ ಎಂದು ಹೇಳುವ ಮೂಲಕ ಬಂಗಾಳದ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.