ಪಟನಾ: ಬಿಹಾರ ವಿಧಾನಸಭಾ ಚುನಾವಣೆಯ ( Bihar Assembly Election 2025 ) ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ನಡೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಹಾಗೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಡಿಎ ) ಪ್ರಸ್ತುತ ಭಾರಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ ದಾಟಿದ್ದು, ಸ್ಪಷ್ಟ ಬಹುಮತದತ್ತ ದಾಪುಗಾಲು ಇಡುತ್ತಿದೆ. ಇನ್ನೊಂದೆಡೆ ರಾಷ್ಟ್ರೀಯ ಜನತಾ ದಳ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮತಗಳಿಕೆಯಲ್ಲಿ ಹಿಂದಿ ಬಿದ್ದಿದೆ.