ಪಾಟ್ನಾದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ರಾಜ್ಯದ ಆಡಳಿತಾರೂಢ ಎನ್‌ಡಿಎಯ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.