ಮಾಜಿ ಸಿಎಂಗಳಾದ ಲಾಲು ಪ್ರಸಾದ್ ಯಾದವ್ ಮತ್ತು ಪತ್ನಿ ರಾಬ್ರಿ ದೇವಿಯವರ Z ಪ್ಲಸ್ ಭದ್ರತೆ... ಹಿಂಪಡೆದ ಬಿಹಾರ ಸರ್ಕಾರ

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ
ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ
Published on
ಪಾಟ್ನಾ: ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರವು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿಗೆ ನೀಡಲಾಗಿದ್ದ ಅತ್ಯುನ್ನತ ಮಟ್ಟದ Z-ಪ್ಲಸ್ ಭದ್ರತೆಯನ್ನು ಹಿಂಪಡೆದುಕೊಂಡಿದೆ ಎಂದು ಶುಕ್ರವಾರ(ಜೂ. 05) ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸರ್ಕಾರ, ವಿಐಪಿಯ ಭದ್ರತಾ ಪರಿಶೀಲನೆ ಬಳಿಕ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಇದೇ ವೇಳೆ ಲಾಲು ಯಾದವ್ ಅವರ ಹಿರಿಯ ಪುತ್ರ ಮತ್ತು ಜನಶಕ್ತಿ ಜನತಾದಳ ಮುಖ್ಯಸ್ಥ ತೇಜ್ ಪ್ರತಾಪ್ ಅವರಿಗೆ ನೀಡಲಾಗಿದ್ದ Y-ಕೆಟಗರಿ ಭದ್ರತೆಯನ್ನು ಸಹ ಹಿಂಪಡೆಯಲಾಗಿದೆ ಎಂದು ಹೇಳಿದೆ.
ಮುಂದುವರೆದು, ಇಂದಿನಿಂದ ಲಾಲು ಯಾದವ್ ಮತ್ತು ರಾಬ್ರಿ ದೇವಿಯವರಿಗೆ ರಾಜ್ಯ ವಿಶೇಷ ಸಶಸ್ತ್ರ ಪಡೆಯ ಪೊಲೀಸರು ಭದ್ರತೆ ನೋಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನೂ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಲಾಲು ಎರಡನೇ ಪುತ್ರ ತೇಜಸ್ವಿ ಯಾದವ್ ಅವರಿಗೆ ನೀಡಲಾಗಿರುವ ವೈ-ಪ್ಲಸ್ ಭದ್ರತೆಯನ್ನು ಮುಂದುವರಿಸಲಾಗಿದೆ. ಜೊತೆಗೆ ಹಿರಿಯ ಮಗಳು ಮತ್ತು ಸಂಸದೆ ಮಿಸಾ ಭಾರತಿ ಮತ್ತು ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರಿಗೆ ಅಸ್ತಿತ್ವದಲ್ಲಿರುವ ಭದ್ರತಾ ವ್ಯವಸ್ಥೆಗಳು ಮುಂದುವರಿಯಲಿವೆ ಎಂದು ತಿಳಿಸಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net