ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು, ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನೀತಿ (Policy) ರಚಿಸುವವರೆಗೆ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಇದನ್ನು ಓಲಾ, ಊಬರ್, ರಾಪಿಡೋ ಹಾಗೂ ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿತು. ಈ ವರ್ಷದ ಜನವರಿಯಲ್ಲಿ ತೀರ್ಪು ನೀಡಿದ ವಿಭಾಗೀಯ ಪೀಠವು, ಬೈಕ್ ಟ್ಯಾಕ್ಸಿಗಳಿಗೆ ಪರ್ಮಿಟ್ ನೀಡುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿ, ಬೈಕ್ ಟ್ಯಾಕ್ಸಿಗಳ ಮೇಲಿದ್ದ ತಡೆಯಾಜ್ಞೆಯನ್ನು ಮುಕ್ತಗೊಳಿಸಿತು. ಆದರೀಗ, ಈ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಸಾರಿಗೆ ಇಲಾಖೆ ಹಾಗೂ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ,(ಏಜೆನ್ಸೀಸ್).