ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆ ಹೆಚ್ಚಿಸುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ | Supreme Court judges

ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Published on
ನವದೆಹಲಿ: ಸಿಜೆಐ ಹೊರತುಪಡಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37ಕ್ಕೆ ಹೆಚ್ಚಿಸುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ ತಿದ್ದುಪಡಿ ಮಸೂದೆ-2026(Supreme Court judges) ಅನ್ನು ಸೋಮವಾರ(ಆ. 03) ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೇ ಅಂಗೀಕರಿಸಲಾಗಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಸೂದೆಯನ್ನು ಮಂಡಿಸಿ ಸಂಕ್ಷಿಪ್ತ ಪರಿಚಯಾತ್ಮಕ ಮಾತನಾಡಿದರು. ಬಳಿಕ ಸಭಾಪತಿಗಳು ಸಂಸದರನ್ನು ಮಾತನಾಡಲು ಆಹ್ವಾನಿಸಿದರು.
ಆದರೆ ವಿಪಕ್ಷಗಳು ನೀಟ್ ಪತ್ರಿಕೆ ಸೋರಿಕೆ ಮತ್ತು ರಾಮ ಮಂದಿರದಿಂದ ದೇಣಿಗೆ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಗದ್ದಲವನ್ನು ಜೋರು ಮಾಡಿದ್ದರಿಂದ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಿ ಅಂಗೀಕರಿಸಲಾಯಿತು. ಇದರೊಂದಿಗೆ ಸದನವು ನ್ಯಾಯಾಧೀಶರ ಸಂಖ್ಯೆ ತಿದ್ದುಪಡಿ ಮಸೂದೆ-2026 ಅನ್ನು ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಿತು.
ಇತ್ತೀಚೆಗೆ, ಜನನ ಮತ್ತು ಮರಣಗಳ ನೋಂದಣಿ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net