ಮಣಿಪುರ, ಯುಪಿ ರೀತಿ ತಮಿಳುನಾಡಿನಲ್ಲೂ ಗಲಭೆ ಸೃಷ್ಟಿಸಲು ಬಿಜೆಪಿ ಪಿತೂರಿ: ಸಿಎಂ ಎಂ.ಕೆ.ಸ್ಟಾಲಿನ್ ಆರೋಪ | CM M K Stalin

ಸಿಎಂ ಎಂ.ಕೆ.ಸ್ಟಾಲಿನ್
ಸಿಎಂ ಎಂ.ಕೆ.ಸ್ಟಾಲಿನ್
Published on
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಇದೇ ತಿಂಗಳು 23ರಂದು ನಡೆಯಲಿದ್ದು ರಾಜಕೀಯ ಪಕ್ಷಗಳ ಪ್ರಚಾರ ಬಿರುಸು ಪಡೆದಿದ್ದು, ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿವೆ. ಬುಧವಾರ(ಏ. 01) ಸಿಎಂ ಎಂ.ಕೆ.ಸ್ಟಾಲಿನ್(CM M K Stalin) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಉತ್ತರ ಪ್ರದೇಶ, ಮಣಿಪುರದಂತೆ ತಮಿಳುನಾಡಿನಲ್ಲಿಯೂ ಗಲಭೆ ಸೃಷ್ಟಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ತಿರುಚಿಯಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕಂಡುಬರುವ ಘರ್ಷಣೆಗಳು ಮತ್ತು ಗುಂಪು ಹತ್ಯೆಗಳು ಇಲ್ಲಿಯವರೆಗೆ ತಮಿಳುನಾಡಿನಲ್ಲಿ ನಡೆದಿಲ್ಲ. ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಹಿಂಸಾಚಾರಗಳು ನಡೆದಿದ್ದು, ಜನರ ಕೊಲೆಗಳಾಗಿವೆ. ತಮಿಳುನಾಡಿನಲ್ಲೂ ಬಿಜೆಪಿ ಅದೇ ರೀತಿ ಸನ್ನಿವೇಶ ಸೃಷ್ಟಿಸಲು ಯತ್ನಿಸುತ್ತಿದೆ. ಆದರೆ ನಮ್ಮ ಪಕ್ಷ ಡಿಎಂಕೆ ಆ ಪಿತೂರಿಯನ್ನು ವಿಫಲಗೊಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ, ಬಿಜೆಪಿ ತಮಿಳುನಾಡಿನ ಹೆಸರನ್ನು ದಕ್ಷಿಣ ಪ್ರದೇಶ ಎಂದು ಬದಲಾಯಿಸಲು ಹಿಂಜರಿಯುವುದಿಲ್ಲ ಎಂದು ಮತದಾರರನ್ನು ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬಂದ್ರೆ, ಮಹಿಳೆಯರಿಗೆ ತಮ್ಮ ಆಯ್ಕೆಯ ಗೃಹ ಉಪಯೋಗಿ ಉಪಕರಣಗಳನ್ನು ಖರೀದಿಸಲು 8 ಸಾವಿರ ರೂಪಾಯಿ ಮೌಲ್ಯದ ಕೂಪನ್​ ನೀಡಲಾಗುವುದು. ಮನೆಯ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ 1,500 ರೂ. ಆರ್ಥಿಕ ಸಹಾಯ ನೀಡುವುದಾಗ ಭರವಸೆ ನೀಡಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net