West Bengal Election: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಚೊಚ್ಚಲ ಬಾರಿಗೆ ಸರ್ಕಾರ ರಚಿಸುವತ್ತ ದಾಪುಗಾಲು ಹಾಕುತ್ತಿದೆ. ಒಟ್ಟು 293 ಸ್ಥಾನಗಳ ಪೈಕಿ ಬಿಜೆಪಿ ಸದ್ಯ 178 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) 110 ಕ್ಕೆ ಕುಸಿದಿದೆ. ಈ ಟ್ರೆಂಡ್ ಮುಂದುವರಿದರೆ, ದಶಕಗಳ ಕಾಲ ಆಳಿದ ಟಿಎಂಸಿ ಅಧಿಕಾರ ಕಳೆದುಕೊಳ್ಳುವುದು ಖಚಿತವಾಗಲಿದ್ದು, ಬಿಜೆಪಿಯ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ತೀವ್ರಗೊಂಡಿದೆ.