ಇದೇ ಸಂದರ್ಭದಲ್ಲಿ ಬಿಜೆಪಿ ಸಂಸ್ಥಾಪನಾ ದಿನದ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿ, ರಾಷ್ಟ್ರ ಮೊದಲು ಎಂಬ ಮಂತ್ರದೊಂದಿಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು ತಮ್ಮ ಸಂಕಲ್ಪವಾಗಿದ್ದು, ಒಂದೆರಡು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಎಂದಿಗೂ ತನ್ನ ರಿಪೋರ್ಟ್ ಕಾರ್ಡ್ನೊಂದಿಗೆ ಜನರ ಬಳಿಗೆ ಹೋಗುವುದಿಲ್ಲ, ಆದರೆ ಬಿಜೆಪಿ ತಾನು ಮಾಡಿದ ಕೆಲಸಗಳನ್ನು ಮತ್ತು ರೈತರ ಸಮೃದ್ಧಿಗಾಗಿ ಕೈಗೊಂಡ ಕ್ರಮಗಳನ್ನು ಸದಾ ಸಾರ್ವಜನಿಕರ ಮುಂದೆ ಮಂಡಿಸುತ್ತದೆ ಎಂದರು.