ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ನಿಶಾಂತ್, ಹೋಳಿ ಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದು ಬಿಹಾರದ ಆಡಳಿತಾರೂಢ ಮೈತ್ರಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಮಾರ್ಚ್ 5 ರಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಇದೇ ವೇಳೆ ಜೆಡಿಯುನಿಂದ ನಿಶಾಂತ್ ಕುಮಾರ್ ಅಥವಾ ನಿತೀಶ್ ಕುಮಾರ್ ಅವರ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ.