ಬರೇಲಿ ಶಾಸಕ ಶ್ಯಾಮ್ ಬಿಹಾರಿ ಲಾಲ್ ಹೃದಯಾಘಾತದಿಂದ ನಿಧನ..ಸಿಎಂ ಯೋಗಿ ಸಂತಾಪ | Shyam Bihari Lal

Shyam Bihari Lal | ಬಿಜೆಪಿ ಶಾಸಕ ಶ್ಯಾಮ್ ಬಿಹಾರಿ ಲಾಲ್ ನಿಧನ
Shyam Bihari Lal | ಬಿಜೆಪಿ ಶಾಸಕ ಶ್ಯಾಮ್ ಬಿಹಾರಿ ಲಾಲ್ ನಿಧನ
Published on
ಲಖನೌ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಫರೀದ್‌ಪುರ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಶ್ಯಾಮ್ ಬಿಹಾರಿ ಲಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಶಾಸಕ ಶ್ಯಾಮ್ ಬಿಹಾರಿ ಅನೇಕ ದಿನಗಳಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಮೆಡಿಸಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ (ಜನವರಿ 1) ತಮ್ಮ 60 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶಾಸಕ ಶ್ಯಾಮ್​ಗೆ ಸರ್ಕ್ಯೂಟ್ ಹೌಸ್‌ನಲ್ಲಿ ಹೃದಯಾಘಾತವಾಗಿದ್ದು, ಅದಕ್ಕಿಂತ ಸ್ವಲ್ಪ ಸಮಯದ ಹಿಂದೆ ಸಚಿವ ಧರಂಪಾಲ್ ಸಿಂಗ್ ಅವರೊಂದಿಗಿನ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಯೋಗಿ ಆದಿತ್ಯನಾಥ್ ಸಂತಾಪ

ಶಾಸಕ ಶ್ಯಾಮ್ ಬಿಹಾರಿ ನಿಧನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಬರೇಲಿ ಜಿಲ್ಲೆಯ ಫರೀದ್‌ಪುರ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕ ಡಾ. ಶ್ಯಾಮ್ ಬಿಹಾರಿ ಲಾಲ್ ಜಿ ಅವರ ಹಠಾತ್ ನಿಧನವು ಅತ್ಯಂತ ದುಃಖಕರವಾಗಿದೆ. ನನ್ನ ವಿನಮ್ರ ಶ್ರದ್ಧಾಂಜಲಿ. ದುಃಖಿತ ಕುಟುಂಬದೊಂದಿಗೆ ನನ್ನ ಸಂತಾಪಗಳು. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net