2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ, ಎನ್‌ಡಿಎ ಒಟ್ಟು 202 ಕ್ಷೇತ್ರಗಳಲ್ಲಿ ಗೆದ್ದು ಅಭೂತಪೂರ್ವ ಜಯ ಸಾಧಿಸಿತು. ಬಿಜೆಪಿ 89 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಇತ್ತ ಜೆಡಿಯು 85 ಸ್ಥಾನಗಳಿಗೆ ಪಡೆಯಿತು. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ 19, ಎಚ್‌ಎಎಂ ಮತ್ತು ಆರ್‌ಎಲ್‌ಎಂ ಕ್ರಮವಾಗಿ 5 ಮತ್ತು 4 ಕ್ಷೇತ್ರಗಳಲ್ಲಿ ಜಯಸಾಧಿಸಿದವು. ಈ ಕಡೆ ಮಹಾಘಟಬಂಧನ್ ಹೀನಾಯ ಸೋಲನ್ನು ಅನುಭವಿಸಿದ್ದು, 243 ಸಂಖ್ಯಾಬಲವಿರುವ ಬಿಹಾರ ವಿಧಾನಸಭೆಯಲ್ಲಿ 35 ಸ್ಥಾನಗಳನ್ನು ಮಾತ್ರ ಗಳಿಸಿತು. 2020 ರಲ್ಲಿ ಅತಿದೊಡ್ಡ ಪಕ್ಷವಾಗಿದ್ದ ಆರ್‌ಜೆಡಿ 25 ಸ್ಥಾನಗಳಿಗೆ ಇಳಿದರೆ, ಕಾಂಗ್ರೆಸ್ ಕೇವಲ ಆರು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತು(ಏಜೆನ್ಸೀಸ್).