ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನ್ಯಾಯಾಲಯದ ತೀರ್ಪನ್ನು ಕ್ಲೀನ್ ಚಿಟ್ ಎಂದು ಬಿಂಬಿಸುವ ಮೂಲಕ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ, ಈ ಆದೇಶವು ಆರೋಪಗಳ ಅರ್ಹತೆಯ ಮೇಲೆ ಅಲ್ಲ, ಕಾನೂನು ಮತ್ತು ತಾಂತ್ರಿಕ ಆಧಾರದ ಮೇಲೆ ನೀಡಲಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ರಾಬರ್ಟ್ ವಾದ್ರಾ ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಟೀಕಿಸಿದರು.