ಪ್ರತಿಭಟನೆಯ ಬಳಿಕ ಮಾತನಾಡಿದ ಬಿಟ್ಟು, ನಿನ್ನೆ ನನ್ನ ಬೆಂಗಾವಲು ಪಡೆಯ ಮೇಲೆ ಮೊಟ್ಟೆ ಮತ್ತು ಟೊಮೆಟೊಗಳನ್ನು ಎಸೆಯಲಾಗಿದೆ. ಇಂದು ನಾನು ಅವುಗಳನ್ನು ವಾಪಸ್ ತಂದಿದ್ದೇನೆ. ಆಪ್ ಕಾರ್ಯಕರ್ತರು ಬಿಜೆಪಿ ನಾಯಕರು, ರ್ಯಾಲಿಗಳು ಮತ್ತು ಯಾತ್ರೆಗಳ ವಿರುದ್ಧ ಪ್ರತಿಭಟನೆ ನಡೆಸುವುದಾದರೆ, ಬಿಜೆಪಿ ಕಾರ್ಯಕರ್ತರು ಕೂಡ ಪಂಜಾಬ್ ಸರ್ಕಾರ ಮತ್ತು ಅದರ ನಾಯಕರ ವಿರುದ್ಧ ಪ್ರತಿಭಟನೆ ನಡೆಸುವ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲಿದ್ದಾರೆ. ನಾವು ಸುಮ್ಮನೆ ಕೂರುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.