ಪೊಲೀಸ್ ಅಧಿಕಾರಿಗೇ ಬ್ಲ್ಯಾಕ್‌ಮೇಲ್ ಕಾಟ: ಮದುವೆ ಒತ್ತಡ ತಾಳಲಾರದೆ ರೈಲಿಗೆ ತಲೆಕೊಟ್ಟ ಸಬ್‌ ಇನ್ಸ್‌ಪೆಕ್ಟರ್! UttarPradesh Crime

ಸಮಾಜಕ್ಕೆ ರಕ್ಷಣೆ ನೀಡಬೇಕಿದ್ದ ಖಾಕಿ ಧಾರಿಯೊಬ್ಬರು, ಯುವತಿಯೊಬ್ಬಳ ನಿರಂತರ ಬ್ಲ್ಯಾಕ್‌ಮೇಲ್ ಹಾಗೂ ಮದುವೆ ಒತ್ತಡಕ್ಕೆ ಬಲಿಯಾದ ದಾರುಣ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಕಳೆದ 11 ತಿಂಗಳಿನಿಂದ ಚಿತ್ರಬಡಗಾಂವ್ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸುತ್ತಿದ್ದ 28 ವರ್ಷದ ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್, ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ.UttarPradesh Crime
ಮೃತರನ್ನು ಸಬ್-ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ (28) ಎಂದು ಗುರುತಿಸಲಾಗಿದೆ.
ಮೃತರನ್ನು ಸಬ್-ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ (28) ಎಂದು ಗುರುತಿಸಲಾಗಿದೆ.WEB
Published on: 

ಲಖನೌ: ಸಮಾಜಕ್ಕೆ ರಕ್ಷಣೆ ನೀಡಬೇಕಿದ್ದ ಖಾಕಿ ಧಾರಿಯೊಬ್ಬರು, ಯುವತಿಯೊಬ್ಬಳ ನಿರಂತರ ಬ್ಲ್ಯಾಕ್‌ಮೇಲ್ ಹಾಗೂ ಮದುವೆ ಒತ್ತಡಕ್ಕೆ ಬಲಿಯಾದ ದಾರುಣ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಕಳೆದ 11 ತಿಂಗಳಿನಿಂದ ಚಿತ್ರಬಡಗಾಂವ್ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸುತ್ತಿದ್ದ 28 ವರ್ಷದ ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್, ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾರೆ.

ಶನಿವಾರ ರಾತ್ರಿ 7ರಿಂದ 8 ಗಂಟೆಯ ನಡುವಿನ ಅವಧಿಯಲ್ಲಿ ವ್ಯಕ್ತಿಯೊಬ್ಬರು ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ರೈಲ್ವೆ ಲೋಕೋ ಪೈಲಟ್ ನೀಡಿದ ವರದಿಯ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆ ರೈಲ್ವೆ ಹಳಿಯ ಸಮೀಪ ಬುಲೆಟ್ ಬೈಕ್ ನಿಂತಿರುವುದು ಕಂಡುಬಂದಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯನ್ನು ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಎಂದು ಗುರುತಿಸಲಾಯಿತು.

ಬಲ್ಲಿಯಾ ಪೊಲೀಸ್ ವರಿಷ್ಠಾಧಿಕಾರಿ ಇರಜ್ ರಾಜಾ ಅವರ ಪ್ರಕಾರ, ಸಂದೀಪ್ ಕುಮಾರ್ ಅವರು ಸಿಕಂದರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಯುವತಿಯೊಬ್ಬಳೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದರು. ಆದರೆ, ಆಕೆ ತಮ್ಮನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು ಹಾಗೂ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಇದೇ ಮಹಿಳೆ ಎರಡು ವರ್ಷಗಳ ಹಿಂದೆ ಮತ್ತೊಬ್ಬ ಪೊಲೀಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ : ಒಂದೇ ದಿನ, ಎರಡು ಭಿನ್ನ ಅವತಾರ: ಪಾಶ್ಚಿಮಾತ್ಯ ಗ್ಲಾಮರ್ ಮತ್ತು ದೇಸಿ ಸೊಬಗಿನಲ್ಲಿ ಮಿಂಚಿದ ಅನನ್ಯಾ ಪಾಂಡೆ! Ananya panday

ಸಂದೀಪ್ ಕುಮಾರ್ ಅವರ ಕುಟುಂಬದವರಿಗೆ ಘಟನೆಯ ಮಾಹಿತಿ ನೀಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಘಟನೆಯ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.