ಕಾರಿನ ಡಿಕ್ಕಿಯಲ್ಲಿ ಚೀಲದೊಳಗೆ 33 ವರ್ಷದ ಮಹಿಳೆಯ ಶವ ಪತ್ತೆ, ಕೊ* ಶಂಕೆ: ಪ್ರಕರಣ ದಾಖಲು | woman

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಹೈದರಾಬಾದ್: ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ಶುಕ್ರವಾರ(ಆ. 21) ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದರ ಡಿಕ್ಕಿಯಲ್ಲಿ 33 ವರ್ಷದ ಮಹಿಳೆಯ ಶವ(woman body) ಚೀಲದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಈ ಘಟನೆ ಎಲ್ಕತುರ್ಥಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರ ಪ್ರಕಾರ, ವಾಹನವು ಸುಮಾರು ಎರಡು ದಿನಗಳ ಕಾಲ ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಆದರೆ ಸ್ಥಳೀಯ ನಿವಾಸಿಗಳು ಅದರಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ.
ಬಳಿಕ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ತಲುಪಿ ವಾಹನವನ್ನು ತಪಾಸಣೆ ನಡೆಸಿದಾಗ, ಕಾರಿನ ಡಿಕ್ಕಿಯಲ್ಲಿ ಚೀಲದೊಳಗೆ ಮಹಿಳೆಯ ಶವ ಅಡಗಿಸಿಟ್ಟಿರುವುದು ಕಂಡುಬಂದಿದೆ.
ಮೃತಳನ್ನು ಮಾನಸ ಎಂದು ಗುರುತಿಸಲಾಗಿದೆ. ನಂತರ ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಾಥಮಿಕ ಪೊಲೀಸ್ ವಿಚಾರಣೆಯಲ್ಲಿ ಈ ಕಾರು ಸುರೇಂದರ್ ರೆಡ್ಡಿ ಎಂಬುವವರಿಗೆ ಸೇರಿದ್ದು, ಅವರು ಅದನ್ನು ವಿನೋದ್ ಎಂಬ ಸಾಫ್ಟ್‌ವೇರ್ ಉದ್ಯೋಗಿಗೆ ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಹನದ ಮಾಲೀಕರು, ಕಾರನ್ನು ಬಾಡಿಗೆಗೆ ಪಡೆದ ವ್ಯಕ್ತಿ ಮತ್ತು ಮೃತ ಮಹಿಳೆಯ ನಡುವಿನ ಸಂಪರ್ಕವನ್ನು ಪರಿಶೀಲಿಸುತ್ತಿದ್ದಾರೆ. ಮಾನಸಾಳ ಮೃತದೇಹ ವಾಹನದೊಳಗೆ ಹೇಗೆ ಬಂತು ಮತ್ತು ಸಾವಿಗೆ ಏನು ಕಾರಣ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net