ಲಂಚ ಆರೋಪ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ಎಫ್‌ಐಆರ್​​ಗೆ ತಡೆ ನೀಡಿದ ಹೈಕೋರ್ಟ್ | Pinarayi Vijayan

ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್
Published on: 

ತಿರುವನಂತಪುರಂ: ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬಸ್ಥರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸೋಮವಾರ(ಅ. 26) ಪಿಣರಾಯಿ ವಿಜಯನ್ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ನ ದ್ವಿಸದಸ್ಯ ಪೀಠವು, ವಿಜಯನ್, ಅವರ ಪುತ್ರಿ ವೀಣಾ ಟಿ ಹಾಗೂ ಅಳಿಯ ಸಿಪಿಎಂ ಶಾಸಕ ಪಿ.ಎ. ಮೊಹಮ್ಮದ್ ರಯಾನ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಎಫ್​ಐಆರ್​ಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣದ ಬಗ್ಗೆ ವಿವರವಾದ ಪರಿಶೀಲನೆ ಅಗತ್ಯವಾಗಿದೆ ಎಂದು ಹೇಳಿ, ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಅಂತಿಮ ತೀರ್ಪು ಬರುವವರೆಗೂ ವಿಜಿಲೆನ್ಸ್ ಇಲಾಖೆ ದಾಖಲಿಸಿದ್ದ ಎಫ್​ಐಆರ್​ಗೆ ತಡೆ ನೀಡಿತು. ಮತ್ತು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

Also Read
ಪ್ರಧಾನಿ ಮೋದಿ ಅದನ್ನು ಮಾಡಲು ಹೇಳಿ, 30 ಸೆಕೆಂಡ್​ಗಳಲ್ಲಿ ಪ್ರತಿಭಟನೆ ನಿಲ್ಲಿಸುತ್ತೇವೆ: ದೆಹಲಿ ವ್ಯಾಪಾರಿಗಳಿಗೆ ರಾಹುಲ್ ಗಾಂಧಿ ಸಲಹೆ | Rahul Gandhi
ಪಿಣರಾಯಿ ವಿಜಯನ್

ಅಕ್ಟೋಬರ್ 09ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಹೈಕೋರ್ಟ್​​ನ ಏಕಸದಸ್ಯ ಪೀಠವು, ವಿಜಿಲೆನ್ಸ್ ಇಲಾಖೆಗೆ ನಿರ್ದೇಶನ ನೀಡಿತ್ತು. ಅದರ ಪ್ರಕಾರ ರಾಜ್ಯ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.

ಐಟಿ ಸಲಹಾ ಸೇವೆಗಳ ಸೋಗಿನಲ್ಲಿ CMRL ವೀಣಾ ವಿಜಯನ್ ಅವರ ಎಕ್ಸಲಾಜಿಕ್ ಸೊಲ್ಯೂಷನ್ಸ್‌ಗೆ 2.78 ಕೋಟಿ ರೂಪಾಯಿಗಳ ಅಕ್ರಮ ಪಾವತಿಗಳನ್ನು ಮಾಡಿದೆ ಎಂದು ಇಡಿ ಆರೋಪಿಸಿ, ರಾಜ್ಯ ವಿಜಿಲೆನ್ಸ್​ ಇಲಾಖೆಗೆ ಪತ್ರ ಬರೆದಿತ್ತು (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net