ರಾಯ್‌ಬರೇಲಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ಅವರ ಬೆಂಬಲಿಗರು ದೂರುದಾರರಿಗೆ ಪ್ರಕರಣದ ವಾದ ಮಂಡಿಸಲು ಅವಕಾಶ ನೀಡುತ್ತಿಲ್ಲ ಎಂಬ ದೂರುದಾರರ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಪ್ರಕರಣವನ್ನು ಲಖನೌಗೆ ವರ್ಗಾಯಿಸುವಂತೆ ಆದೇಶಿಸಿದರು. ಇದರೊಟ್ಟಿಗೆ, ರಾಹುಲ್ ಗಾಂಧಿ ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಕಾರಣ, ಅಲ್ಲಿನ ಅವರ ಬೆಂಬಲಿಗರು ಮತ್ತು ರಾಯ್‌ಬರೇಲಿ ಜಿಲ್ಲೆಯ ವಕೀಲರು ಗಲಾಟೆ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪವನ್ನೂ ನ್ಯಾಯಾಲಯ ದಾಖಲಿಸಿಕೊಂಡಿದೆ. ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಕ್ಷೇತ್ರದ ಹಾಲಿ ಲೋಕಸಭಾ ಸದಸ್ಯರಾಗಿರುವುದರಿಂದ, ಪ್ರಕರಣವನ್ನು ಬೇರೆ ಜಿಲ್ಲೆಗೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಎಲ್ಲಾ ವಾಸ್ತವಾಂಶಗಳನ್ನು ಪರಿಗಣಿಸಿ, ನ್ಯಾಯ ಸಮ್ಮತತೆಯ ದೃಷ್ಟಿಯಿಂದ ಅರ್ಜಿಯನ್ನು ರಾಯ್‌ಬರೇಲಿ ಜಿಲ್ಲೆಯಿಂದ ಲಖನೌಗೆ ವರ್ಗಾಯಿಸುವುದು ಸೂಕ್ತ ಎಂದು ನ್ಯಾಯಾಲಯ ಹೇಳಿದೆ.