ಅಹಮದಾಬಾದ್ : ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಬೀದಿ ದನಗಳ ಹಾವಳಿ ದಿನೇ ದಿನೇ ಮಿತಿ ಮೀರಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನೊಬ್ಬನ ಮೇಲೆ (Bull Attack) ಗೂಳಿಯೊಂದು ಭೀಕರವಾಗಿ ದಾಳಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತಾದ ಭಯಾನಕ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.